ಒಳಗೇನಿದೆ!?

ಕೆಎಸ್‌ಎಚ್‌ಎ, ಎಸ್‌ಐಎಚ್‌ಆರ್‌ಎ ಅಧ್ಯಕ್ಷರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಭೇಟಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರನ್ನು ಕೆಎಸ್‌ಎಚ್‌ಎ- ಎಸ್‌ಐಎಚ್‌ಆರ್‌ಎ ಅಧ್ಯಕ್ಷರು ಮಂಗಳವಾರ ಬೆಂಗಳೂರಿನಲ್ಲಿ ಭೇಟಿ ಆಗಿದ್ದಾರೆ.

ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ(ಕೆಎಸ್‌ಎಚ್‌ಎ)ದ ಅಧ್ಯಕ್ಷರಾದ ಜಿ.ಕೆ. ಶೆಟ್ಟಿ, ದಕ್ಷಿಣ ಭಾರತ ಹೋಟೆಲುಗಳು ಮತ್ತು ರೆಸ್ಟೋರೆಂಟ್‌ಗಳ ಸಂಘ(ಎಸ್‌ಐಎಚ್‌ಆರ್‌ಎ)ದ ಅಧ್ಯಕ್ಷರಾದ ಕೆ. ಶ್ಯಾಮ ರಾಜು ಹಾಗೂ ಮೈಸೂರ್‌ ಸೇಲ್ಸ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್‌ (ಎಂಎಸ್‌ಐಎಲ್‌) ವ್ಯವಸ್ಥಾಪಕ ನಿರ್ದೇಶಕ ಮನೋಜ್‌ ಅವರು ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಶುಭ ಹಾರೈಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಅಭಿನಂದನೆ ಸಲ್ಲಿಸಿದ ಜಿ.ಕೆ. ಶೆಟ್ಟಿ, ಕೆ. ಶ್ಯಾಮ ರಾಜು, ಮನೋಜ್‌ ಮತ್ತಿತರರು.

ಹೋಟೆಲೋದ್ಯಮದ ಕುರಿತು ಮಾತನಾಡಿದ ಶಾಲಿನಿ ರಜನೀಶ್‌ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಆಗಬೇಕು. ಅದಕ್ಕಾಗಿ, ಕರಾವಳಿ ಪ್ರದೇಶದಲ್ಲಿ ಸ್ಟಾರ್‌ ಹೋಟೆಲ್‌ಗಳ ನಿರ್ಮಾಣ ಆಗಬೇಕಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು ಎಂಬುದಾಗಿ ಜಿ.ಕೆ. ಶೆಟ್ಟಿ ಅವರು ತಿಳಿಸಿದ್ದಾರೆ.

ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್‌ಎ ನೂತನ ಅಧ್ಯಕ್ಷ ಎಚ್‌.ಎಸ್. ಸುಬ್ರಹ್ಮಣ್ಯ ಹೊಳ್ಳ

ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್‌ ಸಾರಿಗೆ ಸಂಘಟನೆಯ ಸ್ಟೇರಿಂಗ್!

ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ