ಬೆಂಗಳೂರು: ರಾಜ್ಯದ ವಿವಿಧ ಕ್ಷೇತ್ರಗಳ ಮುಖ್ಯಸ್ಥರೊಂದಿಗೆ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಸಮಾಲೋಚನೆ ನಡೆಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೋಟೆಲೋದ್ಯಮಿಗಳ ಜೊತೆಗೂ ಮಹತ್ವದ ಮಾತುಕತೆ ನಡೆಸಿದ್ದಾರೆ.
ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್‌ಎಸ್‌ಎಸ್‌ಎಐ)ದ ಅನ್ವಯ ಆಹಾರ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ನಗರದ ಹೋಟೆಲ್, ಮಾಲ್, ಆರ್‌ಎಂಸಿ ಯಾರ್ಡ್ ಮುಂತಾದ ವಲಯದ ಸಂಘಗಳ ಪದಾಧಿಕಾರಿಗಳು, ಮುಖ್ಯಸ್ಥರನ್ನು ಆಹ್ವಾನಿಸಿದ್ದರು.
ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್, ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ, ಗೌರವ ಕಾರ್ಯದರ್ಶಿ ವೀರೇಂದ್ರ ಕಾಮತ್ ಮುಂತಾದವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ʼಸಚಿವರು ಪ್ರಮುಖವಾಗಿ ಎಫ್‌ಎಸ್‌ಎಸ್‌ಎಐ ನಿಯಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹೋಟೆಲಿಗರೂ ಸೇರಿದಂತೆ ವಿವಿಧ ಕ್ಷೇತ್ರದ ಪ್ರಮುಖರನ್ನು ಆಹ್ವಾನಿಸಿದ್ದರುʼ ಎಂದ ಪಿ.ಸಿ. ರಾವ್ ಅವರು, ಸಭೆಯಲ್ಲಿ ಚರ್ಚಿಸಲ್ಪಟ್ಟ ವಿಷಯಗಳ ಕುರಿತು ಮಾಹಿತಿ ನೀಡಿದರು.
ʼಇಲಾಖೆ ವತಿಯಿಂದ ಬೆಂಗಳೂರಿನ ಮೂರ್ನಾಲ್ಕು ಕಡೆ ಎಫ್‌ಎಸ್‌ಎಸ್‌ಎಐ ಲ್ಯಾಬ್ ನಿರ್ಮಿಸಲಿರುವುದಾಗಿ ಸಚಿವರು ಹೇಳಿದ್ದಾರೆ. ಅದನ್ನು ಬೆಂಗಳೂರು ಹೋಟೆಲುಗಳ ಸಂಘದ ಮೂಲಕ ನಿರ್ವಹಿಸುವಂತೆ ಮಾಡುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಾವಕಾಶ, ನಿರ್ವಹಣಾ ವೆಚ್ಚ ಇತ್ಯಾದಿ ಕುರಿತು ನಾವು ಚರ್ಚಿಸಿ ಮಾಹಿತಿ ನೀಡಬೇಕಾಗಿದೆʼ ಎಂದು ಪಿ.ಸಿ. ರಾವ್ ತಿಳಿಸಿದ್ದಾರೆ.
ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್‌ಎ ನೂತನ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ
ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್ ಸಾರಿಗೆ ಸಂಘಟನೆಯ ಸ್ಟೇರಿಂಗ್!
ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?