ಬೆಂಗಳೂರು: ಹೋಟೆಲ್ ಉದ್ಯಮವನ್ನು ಕಾಡುತ್ತಿರುವ ಚಿಲ್ಲರೆ ಸಮಸ್ಯೆ ವಿಚಾರವಾಗಿ ಬೆಂಗಳೂರು ಹೋಟೆಲುಗಳ ಸಂಘದವರು ಸೋಮವಾರ ಭಾರತೀಯ ರಿಸರ್ವ್ ಬ್ಯಾಂಕ್ಗೆ ಭೇಟಿ ನೀಡಿ ಮನವಿ ಮಾಡಿಕೊಂಡಿದ್ದಾರೆ.
ರಿಸರ್ವ್ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕರನ್ನು ಭೇಟಿಯಾದ ಬೆಂಗಳೂರು ಹೋಟೆಲುಗಳ ಸಂಘದ ಪದಾಧಿಕಾರಿಗಳು, ಸಣ್ಣ ಚಿಲ್ಲರೆ ತೊಂದರೆಯನ್ನು ಬಗೆಹರಿಸುವಂತೆ ವಿನಂತಿ ಮಾಡಿಕೊಂಡಿದ್ದಾರೆ. ಅದಕ್ಕೆ ಪ್ರಧಾನ ವ್ಯವಸ್ಥಾಪಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚಿಲ್ಲರೆ ಒದಗಿಸುವ ಭರವಸೆ ನೀಡಿದ್ದಾರೆ.
ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ, ಗೌರವ ಕಾರ್ಯದರ್ಶಿ ವೀರೇಂದ್ರ ಕಾಮತ್, ಜಂಟಿ ಕಾರ್ಯದರ್ಶಿ ಬಿ.ಎಂ. ಧನಂಜಯ, ಹೋಟೆಲೋದ್ಯಮಿಗಳಾದ ರಾಧಾಕೃಷ್ಣ ಅಡಿಗ, ಕೃಷ್ಣರಾಜ್ ಅವರು ಆರ್ಬಿಐಗೆ ಈ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ ಬಿಜೆಪಿ ಇತ್ತೀಚೆಗೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲೂ ಹೋಟೆಲೋದ್ಯಮಿ ರಾಧಾಕೃಷ್ಣ ಅಡಿಗ ಅವರು ಹೋಟೆಲ್ ಉದ್ಯಮ ಎದುರಿಸುತ್ತಿರುವ ಚಿಲ್ಲರೆ ಸಮಸ್ಯೆ ಕುರಿತು ಗಮನ ಸೆಳೆದಿದ್ದರು.
ಇದೂ ಓದಿ: ‘ತಾಜಾ ತಿಂಡಿ’ಯೂ, ಖ್ಯಾತ ಐರಿಷ್ ಕವಿಯೂ ಮತ್ತು ಪತ್ರಕರ್ತ ವಿಶ್ವೇಶ್ವರ ಭಟ್!
ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್ಎ ನೂತನ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ
ಇದೂ ಓದಿ: ಹೋಟೆಲ್ ಓನರ್ ಪಾದಕ್ಕೆರಗಿ ಆಶೀರ್ವಾದ ಪಡೆದ ಅನಂತ್ ಅಂಬಾನಿ-ರಾಧಿಕಾ ಮರ್ಚಂಟ್