ಬೆಂಗಳೂರು: ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಸದಂತೆ ನಿಷೇಧ ಹೇರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದಾರೆ.
ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆಯಲ್ಲಿ ಬಟ್ಟೆಯ ಬದಲು ಪ್ಲಾಸ್ಟಿಕ್ ಶೀಟ್ ಬಳಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ನಿಷೇಧ ಹೇರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಹೋಟೆಲ್‌ನಲ್ಲಿ ಇಡ್ಲಿ ತಯಾರಿಸುವ ಸಂದರ್ಭ ಪಾತ್ರೆಗೆ ಹಿಟ್ಟು ಅಂಟದಂತೆ ತೆಳುವಾದ ಬಟ್ಟೆ ಬದಲು ಪ್ಲಾಸ್ಟಿಕ್ ಶೀಟ್ ಬಳಸುತ್ತಿರುವುದು ಕಂಡುಬಂದಿದೆ. ಇದು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಇದರ ವಿರುದ್ಧ ನಿಷೇಧ ಹೇರಲಾಗುವುದು. ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಶೀಟ್ ಬಳಸದಂತೆ ಇನ್ನೆರಡು ದಿನಗಳಲ್ಲಿ ಸುತ್ತೋಲೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇಡ್ಲಿ ತಯಾರಿಗೆ ಸಂಬಂಧಿಸಿ ತಪಾಸಣೆ ನಡೆಸಿದ 251 ಸ್ಥಳಗಳಲ್ಲಿ 52 ಕಡೆಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವುದು ಕಂಡುಬಂದಿದೆ. ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೇ ಇನ್ಮುಂದೆ ಯಾರೂ ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸದಂತೆ ನಿಷೇಧಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇದೂ ಓದಿ: ‘ಬ್ರಾಹ್ಮಣರ ಕಾಫಿ ಬಾರ್’@60; ಬೆಂಗಳೂರು ಹೋಟೆಲುಗಳ ಸಂಘದಿಂದ ಅಭಿನಂದನೆ
ಇದೂ ಓದಿ: ವಿದ್ಯಾರ್ಥಿ ಭವನದ ಎದುರು ʼಇಡ್ಲಿ-ಸಾಂಬಾರ್, ದೋಸೆ-ಚಟ್ನಿʼಯಲ್ಲೇ ಯೋಗರಾಜ್ ಭಟ್ಟರ ಸಂಗೀತ ಪಾಕ!
ಇದೂ ಓದಿ: ಕುಂಭಮೇಳ: ಕನ್ನಡಿಗ ಯಾತ್ರಿಕರ ಮೆಚ್ಚುಗೆ ಗಳಿಸುತ್ತಿರುವ ಅಯೋಧ್ಯೆಯ ಉಡುಪಿ ಹೋಟೆಲ್