ಬೆಂಗಳೂರು: ಕನ್ನಡ ಭಾಷಾ ವಿಚಾರವಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ, ಇದೀಗ ಇನ್ನೊಂದು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಆ ಪ್ರಕಾರ ಇನ್ನುಮುಂದೆ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲೇ ಹೆಸರು ಮುದ್ರಿಸುವುದು ಕಡ್ಡಾಯ ಆಗಿರಲಿದೆ.
ನಾಡಿನ ಭಾಷೆ ಈ ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆ ಆಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ವ್ಯವಹಾರ ಸ್ಥಳೀಯ ಭಾಷೆಯಲ್ಲಿ ಇರಬೇಕು. ಆದ್ದರಿಂದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಸರ್ಕಾರ ಜಾರಿಗೆ ತಂದಿದೆ.
ಹೋಟೆಲ್ ಕನ್ನಡ.ಕಾಮ್‌ನಲ್ಲಿ ಜಾಹೀರಾತು ನೀಡಿ ಪ್ರೋತ್ಸಾಹಿಸಿ..
ಈ ಅಧಿನಿಯಮದ ಅನ್ವಯ ಕನ್ನಡಕ್ಕೆ ಮಹತ್ವ ಒದಗಿಸಲು ಕ್ರಮಕೈಗೊಂಡಿರುವ ಸರ್ಕಾರ, ರಾಜ್ಯದಲ್ಲಿ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಇತರ ಭಾಷೆ ಜತೆಗೆ ಕನ್ನಡದಲ್ಲೂ ಇರಬೇಕು ಎಂದು ಆದೇಶ ಹೊರಡಿಸಿದೆ.
ಅಲ್ಲದೆ ಈ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಮೇಲ್ವಿಚಾರಣೆ ನಡೆಸಲು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಕೆ.ಉಮಾದೇವಿ ಅವರು ಆದೇಶಿಸಿದ್ದಾರೆ.
ಇದೂ ಓದಿ: ಹೋಟೆಲ್ ಕ್ಷೇತ್ರಕ್ಕಾಗಿ ʼಬಿಎಚ್‌ಎ ಫುಡ್ ಅವಾರ್ಡ್ಸ್-2025ʼ: ನಾಮನಿರ್ದೇಶನ ಸಲ್ಲಿಸಲು ಇಲ್ಲಿದೆ ವಿವರ, ಅವಕಾಶ..
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ