ಬೆಂಗಳೂರು: ಭವಿಷ್ಯ ನಿಧಿ (ಪಿಎಫ್) ಹಣವನ್ನು ಸದ್ಯದಲ್ಲೇ ಯುಪಿಐ ಮತ್ತು ಎಟಿಎಂ ಮೂಲಕ ಹಿಂಪಡೆಯಲು ಅವಕಾಶ ಕಲ್ಪಿಸುವ ವ್ಯವಸ್ಥೆ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ʼಇದೇ ಮೇ ಅಥವಾ ಜೂನ್ ತಿಂಗಳೊಳಗೆ ಈ ವ್ಯವಸ್ಥೆ ಜಾರಿಗೆ ಬರಲಿದೆʼ ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸುಮಿತ್ರಾ ದಾವ್ರಾ ಹೇಳಿದ್ದಾರೆ.
ಹಣ ವಾಪಸ್ ಪಡೆಯುವುದು ಮಾತ್ರವಲ್ಲದೆ, ಪಿಎಫ್ ಖಾತೆಯಲ್ಲಿ ಬ್ಯಾಲೆನ್ಸ್ ಎಷ್ಟಿದೆ ಎಂಬುದನ್ನೂ ಯುಪಿಐ ಮತ್ತು ಎಟಿಎಂ ಮೂಲಕ ತಿಳಿದುಕೊಳ್ಳಲು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಅವಕಾಶ ಕಲ್ಪಿಸಲಿದೆ.
ಕಾರ್ಮಿಕ ಇಲಾಖೆ ಈಗಾಗಲೇ ಈ ಪ್ರಸ್ತಾವನೆಗೆ ತನ್ನ ಒಪ್ಪಿಗೆ ನೀಡಿದೆ. ಒಂದು ಲಕ್ಷ ರೂಪಾಯಿವರೆಗಿನ ಪಿಎಫ್ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಳ್ಳಬಹುದು. ಹೀಗಾಗಿ ಖುದ್ದಾಗಿ ಬ್ಯಾಂಕಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪಿಎಫ್ ವಹಿವಾಟನ್ನು ಡಿಜಿಟಲ್ ವ್ಯವಸ್ಥೆ ಮೂಲಕ ಸುಲಭವಾಗಿ ಟ್ರ್ಯಾಕ್ ಮಾಡಬಹುದು. ಪಿಎಫ್ ಹಿಂಪಡೆಯುವ ಕ್ಲೇಮುಗಳ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಡಿಜಿಟಲೀಕರಣ ಮಾಡಲಾಗಿದ್ದು, ಇನ್ನು ಮುಂದೆ ಮೂರು ದಿನಗಳಲ್ಲಿ ಇತ್ಯರ್ಥಗೊಳಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಉತ್ಪಾದನೆ-ಮಾರಾಟ ಆಗುವ ಎಲ್ಲ ಉತ್ಪನ್ನಗಳ ಮೇಲೆ ಇನ್ನು ಕನ್ನಡದಲ್ಲಿ ಹೆಸರು ಕಡ್ಡಾಯ; ಸರ್ಕಾರದ ಆದೇಶ
ಇದನ್ನೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್ ಸಾರಿಗೆ ಸಂಘಟನೆಯ ಸ್ಟೇರಿಂಗ್!
ಇದನ್ನೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ