ಒಳಗೇನಿದೆ!?

ಐಪಿಎಲ್‌ ಕ್ರಿಕೆಟ್‌: ಆರ್‌ಸಿಬಿ ಗೆಲುವಿಗಾಗಿ ಬೆಂಗಳೂರು ಹೋಟೆಲುಗಳ ಸಂಘದಿಂದ ಶುಭ ಹಾರೈಕೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್‌ ಕಿಂಗ್ಸ್‌ ನಡುವೆ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 18ನೇ ಆವೃತ್ತಿಯ ಅಂತಿಮ ಹಣಾಹಣಿ ನಡೆಯಲಿದ್ದು, ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳ ಮಹಾಪೂರವೇ ಹರಿದುಬರುತ್ತಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಕಪ್‌ ಗೆಲ್ಲಲಿ ಎಂಬ ಬಹುನಿರೀಕ್ಷಿತ ಆಸೆ ಈಡೇರಲಿ ಎಂಬುದಾಗಿ ಹಲವರು ನಾನಾ ರೀತಿಯಲ್ಲಿ ಶುಭ ಹಾರೈಸುತ್ತಿದ್ದು, ಅಂತಿಮ ಹಣಾಹಣಿಯ ದೃಶ್ಯಾವಳಿಯನ್ನು ಕಣ್ತುಂಬಿಕೊಳ್ಳಲು ಕುತೂಹಲದಿಂದ ಕಾಯುತ್ತಿದ್ದಾರೆ. ಅದೇ ರೀತಿ ಬೆಂಗಳೂರು ಹೋಟೆಲುಗಳ ಸಂಘವೂ ಆರ್‌ಸಿಬಿಗೆ ಶುಭ ಹಾರೈಸಿದೆ.

ಇಂದು ನಡೆಯುವ ಐಪಿಎಲ್‌  ಪಂದ್ಯದಲ್ಲಿ ಆರ್‌ಸಿಬಿ ಜಯಗಳಿಸಲಿದೆ. ಬೆಂಗಳೂರಿನ ಬಹಳಷ್ಟು ಹೋಟೆಲ್‌, ಪಬ್‌, ಬಾರ್‌ & ರೆಸ್ಟೋರೆಂಟ್‌ಗಳಲ್ಲಿ ತಿಂಡಿ-ತಿನಿಸುಗಳ ಜೊತೆಗೆ ಐಪಿಎಲ್‌ ಪಂದ್ಯದ ವೀಕ್ಷಣೆಗೂ ವ್ಯವಸ್ಥೆ ಮಾಡಲಾಗಿದೆ. ಕೋಟ್ಯಂತರ ಕನ್ನಡಿಗರ ಆಸೆಯಂತೆ ಹೋಟೆಲ್‌ ಮಾಲೀಕರು, ಕಾರ್ಮಿಕರು, ಗ್ರಾಹಕರು ಆರ್‌ಸಿಬಿ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದೇವೆ ಎಂದು ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್‌ ತಿಳಿಸಿದ್ದಾರೆ.

ಇದೂ ಓದಿ: ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ಕುಂದಾಪುರದವರ ʼಉಡುಪಿ ಕೆಫೆʼ; ದ ಬೆಸ್ಟ್‌ ಹೋಟೆಲ್‌ ಎಂಬ ಮೆಚ್ಚುಗೆ

ಇದೂ ಓದಿ:ಹೋಟೆಲ್ ಉದ್ಯಮಕ್ಕಿಳಿದ ಸಿನಿಮಾ ನಿರ್ದೇಶಕ; ತಾತ ನಡೆಸುತ್ತಿದ್ದ ಹೋಟೆಲ್‌ಗೆ ಮೊಮ್ಮಗನ‌ ನೇತೃತ್ವ

ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ