ಬೆಂಗಳೂರು: ಇದ್ದಕ್ಕಿದ್ದಂತೆ ಭಾರಿ ಪ್ರಮಾಣದ ತೆರಿಗೆ ಪಾವತಿಸುವಂತೆ ಆದೇಶಿಸಿ ಬೇಕರಿ-ಕಾಂಡಿಮೆಂಟ್ಸ್ ಮಾಲೀಕರಿಗೆ ವಾಣಿಜ್ಯ ತೆರಿಗೆ ಇಲಾಖೆ ಇತ್ತೀಚೆಗೆ ಕಳುಹಿಸಿರುವ ನೋಟಿಸ್‌ಗಳ ಕಾರಣಕ್ಕೆ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿಯವರು ಮಧ್ಯಪ್ರವೇಶ ಮಾಡಬೇಕು ಎಂಬ ದನಿ ಎದ್ದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ, ಸಂಕಷ್ಟದಲ್ಲಿರುವ ಬೇಕರಿ-ಕಾಂಡಿಮೆಂಟ್ಸ್ ಮಾಲೀಕರ ಸಮಸ್ಯೆ ಪರಿಹಾರ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಅಧ್ಯಕ್ಷ ಡಾ.ರವಿ ಶೆಟ್ಟಿ ಬೈಂದೂರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಕೋರಿಕೊಂಡಿದ್ದಾರೆ.
ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?
ಏಕಾಏಕಿ ನಾಲ್ಕು ವರ್ಷಗಳ ವಾಣಿಜ್ಯ ತೆರಿಗೆ ಪಾವತಿಸುವಂತೆ ಹಲವು ಬೇಕರಿ-ಕಾಂಡಿಮೆಂಟ್ಸ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೆಲವು ಪ್ರಕರಣಗಳಲ್ಲಿ 50 ಲಕ್ಷ ರೂಪಾಯಿಗಿಂತಲೂ ಅಧಿಕ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಲಾಗಿದೆ. ಸಣ್ಣ ವ್ಯಾಪಾರಿಗಳು ಇಷ್ಟು ದೊಡ್ಡ ಮೊತ್ತ ಕಟ್ಟುವುದು ಕಷ್ಟಕರವಾಗಿದ್ದು, ಅವರು ಹಣ ಕಟ್ಟಲಾಗದೆ ಪರದಾಡುತ್ತಿದ್ದಾರೆ. ಕೆಲವರು ಅಂಗಡಿಗಳನ್ನು ಮಾರಿದರೂ ತೆರಿಗೆ ಕಟ್ಟಲಾಗದ ಪರಿಸ್ಥಿತಿ ಇದೆ ಎಂದು ಅವರು ಅಹವಾಲು ಸಲ್ಲಿಸಿದ್ದಾರೆ.

ಇದೂ ಓದಿ: ಬೇಕರಿ-ಕಾಂಡಿಮೆಂಟ್ಸ್, ಬೀಡಾ ಅಂಗಡಿ ಮಾಲೀಕರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮ
ಜೊತೆಗೆ, 2021ರಿಂದ 2025ರ ವರೆಗಿನ ತೆರಿಗೆ ವಿನಾಯಿತಿ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಸಮಸ್ಯೆಯನ್ನು ಸೂಕ್ತ ರೀತಿಯಲ್ಲಿ ಪರಿಹಾರ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆಯಬೇಕು ಎಂದೂ ಅವರು ಕೋರಿದ್ದಾರೆ.

ಬೇಕರಿ-ಕಾಂಡಿಮೆಂಟ್ಸ್ ಮಾಲೀಕರ ಸಮಸ್ಯೆ ಪರಿಹಾರ ಸಲುವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್, ವಿಧಾನಪರಿಷತ್ ಸಭಾಪತಿ ಮಾತ್ರವಲ್ಲದೆ ವಾಣಿಜ್ಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ರವಿ ಶೆಟ್ಟಿ ಬೈಂದೂರು ಮನವಿ ಸಲ್ಲಿಸಿದ್ದಾರೆ.
ಇದೂ ಓದಿ: ಹೋಟೆಲ್‌ಗಳಲ್ಲಿ ನೀವು ಸೇವಿಸುವ ಪನೀರ್ ಕೃತಕವೇ?; ಏನಿದು ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ?
ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ



