ಒಳಗೇನಿದೆ!?

ಮುಟ್ಟಿನ ರಜೆಗಾಗಿ ಕೋರ್ಟ್‌ ಮೆಟ್ಟಿಲೇರಿದ ಹೋಟೆಲ್‌ ಉದ್ಯೋಗಿ: ಸರ್ಕಾರಕ್ಕೆ ನೋಟಿಸ್‌ ಜಾರಿ

ಹೋಟೆಲ್‌ ಕನ್ನಡ, ಬೆಂಗಳೂರು: ಋತುಚಕ್ರ (ಮುಟ್ಟಿನ) ರಜೆ ಸಲುವಾಗಿ ಹೋಟೆಲ್‌ ಉದ್ಯೋಗಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿರುವುದರಿಂದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಯಾಗಿದೆ.

ಸರ್ಕಾರ ಅಧಿಸೂಚನೆ ಹೊರಡಿಸಿದ್ದರೂ ಮುಟ್ಟಿನ ರಜೆಯನ್ನು ಹೋಟೆಲ್‌ಗಳಲ್ಲಿ ಜಾರಿಗೆ ತರಲಾಗಿಲ್ಲ. ಈ ಸಂಬಂಧ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಬೆಳಗಾವಿಯ ಹೋಟೆಲೊಂದರ ಉದ್ಯೋಗಿ ಚಂದ್ರವ್ವ ಹನಮಂತ ಗೋಕಾವಿ ಎಂಬುವರು ಹೈಕೋರ್ಟ್‌ನ ಧಾರವಾಡ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ನಡೆಸಿತು.

ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ

ಕಾಯಂ, ಗುತ್ತಿಗೆ ಮತ್ತು ಹೊರಗುತ್ತಿಗೆ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೊಂದು ವೇತನಸಹಿತ ಮುಟ್ಟಿನ ರಜೆ ಕಡ್ಡಾಯಗೊಳಿಸಿ ಕಾರ್ಮಿಕ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ನಿರ್ದೇಶಿಸಬೇಕು ಎಂದು ಸರ್ಕಾರಕ್ಕೆ ಪೀಠ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ಹಲವು ವಲಯಗಳ ಮಹಿಳಾ ಉದ್ಯೋಗಿಗಳಿಗೆ ಈ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ಮುಟ್ಟಿನ ರಜೆ ನೀಡುವ ಬಗ್ಗೆ ಕಂಪನಿಗಳಿಗೆ ಸರ್ಕಾರ ಈ ಬಗ್ಗೆ ನಿರ್ದೇಶನ ನೀಡಬೇಕು ಎಂದರು.

ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?

ಸರ್ಕಾರದ ಪರ ವಾದಿಸಿದ ವಕೀಲರು, ಮುಟ್ಟಿನ ರಜೆ ನೀತಿ ಕಡ್ಡಾಯ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ನಿಯಮಕ್ಕೆ ಒಳಪಡುವ ಎಲ್ಲ ಸಂಸ್ಥೆಗಳಿಗೆ ಮಾಹಿತಿ ನೀಡಲಾಗುವುದು. ಆ ಸಂಬಂಧಿತ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಮುಟ್ಟಿನ ರಜೆ ನೀತಿಯ ಬಗ್ಗೆ ಮಹಿಳಾ ಉದ್ಯೋಗಿಗಳಿಗೆ ತಿಳಿಸಲು ಸಂಸ್ಥೆಗಳಿಗೆ ನೀಡುವ ನಿರ್ದೇಶನದ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆ ಜನವರಿ 5ಕ್ಕೆ ನಿಗದಿಯಾಗಿದೆ.

ಇದೂ ಓದಿ: ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕ್‌ ನಿರ್ದೇಶಕರಾಗಿ 27 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಿ.ಎಸ್‌. ಮಂಜುನಾಥ್‌

ಇದೂ ಓದಿ: ʼಹಳ್ಳಿಮನೆʼ ಸಂಜೀವ ರಾವ್‌ ಅವರಿಗೆ ʼಬಿಎಚ್‌ಎ ಜೀವಮಾನದ ಸಾಧನೆ ಪ್ರಶಸ್ತಿʼ

ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್‌ಎ ನೂತನ ಅಧ್ಯಕ್ಷ ಎಚ್‌.ಎಸ್. ಸುಬ್ರಹ್ಮಣ್ಯ ಹೊಳ್ಳ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ