ಹೋಟೆಲ್ ಕನ್ನಡ, ಬೆಂಗಳೂರು: ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಗೌರವಾಧ್ಯಕ್ಷರಾಗಿ ಉದ್ಯಮಿ ಎಂ.ರಾಜೇಂದ್ರ ಅವರು ಆಯ್ಕೆ ಆಗಿದ್ದಾರೆ. ಗೌರವಾಧ್ಯಕ್ಷರಾಗಿ ಎಂ. ರಾಜೇಂದ್ರ ಅವರು ಮರು ಆಯ್ಕೆ ಆಗಿರುವುದಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ರಾಜೇಂದ್ರ ಅವರು ನಾಲ್ಕು ವರ್ಷಗಳ ಕಾಲ ಕರ್ನಾಟಕ ರಾಜ್ಯ ಹೋಟೆಲುಗಳ ಅಧ್ಯಕ್ಷರಾಗಿ ಹಾಗೂ ಎಂಟು ವರ್ಷಗಳ ಕಾಲ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಇದೂ ಓದಿ: 50 ವರ್ಷಗಳಲ್ಲಿ ಪ್ರಥಮ ಬಾರಿಗೆ ಕರ್ನಾಟಕದವರಿಗೆ ಅಧ್ಯಕ್ಷ ಸ್ಥಾನ; ಎಫ್ಎಚ್ಆರ್ಎಐಗೆ ಕೆ. ಶ್ಯಾಮರಾಜು ಆಯ್ಕೆ
ಕರ್ನಾಟಕ ರಾಜ್ಯ ಹೊಟೇಲುಗಳ ಸಂಘಕ್ಕೆ 75 ವರ್ಷಗಳು ಸಂದ ಸಮಯದಲ್ಲಿ 30 ಜಿಲ್ಲೆಗಳ ಪ್ರವಾಸ ಮಾಡಿ ಎಲ್ಲ ಜಿಲ್ಲಾ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳನ್ನು ಹುರಿದುಂಬಿಸಿದ್ದ ಅವರು, ವಿವಿಧ ಇಲಾಖೆಗಳಲ್ಲಿ ಸೃಷ್ಟಿಯಾಗುತ್ತಿದ್ದ ತೊಂದರೆಗಳನ್ನು ನಿವಾರಿಸಲು ಅಪಾರ ಶ್ರಮ ವಹಿಸಿದ್ದರು.
ಹುಬ್ಬಳ್ಳಿಯಲ್ಲಿ ನಡೆದ 16ನೇ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಮತ್ತು ಮಾಜಿ ಮುಖ್ಯಮಂತ್ರಿಗಳನ್ನು ಕರೆಸಿ ಸಂಘದ ಇತಿಹಾಸದಲ್ಲೇ ಮೈಲಿಗಲ್ಲಾಗುವಂತೆ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸಿದ್ದರು.
ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್‌ಎ ನೂತನ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ
ದಕ್ಷಿಣ ಭಾರತ ಹೊಟೇಲ್‌ಗಳ ಸಂಘದ ಅಧ್ಯಕ್ಷ ಕೆ.ಶಾಮರಾಜು, ಕರ್ನಾಟಕ ರಾಜ್ಯ ಹೊಟೇಲುಗಳ ಸಂಘದ ಅಧ್ಯಕ್ಷ ಬಿ.ಕೆ. ಶೆಟ್ಟಿ, ಉಪಾಧ್ಯಕ್ಷ ರವಿಶಾಸ್ತ್ರಿ, ನಿಕಟ ಪೂರ್ವ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಗೌರವಾಧ್ಯಕ್ಷ ಟಿ. ಚಂದ್ರಶೇಖರ್ ಹೆಬ್ಬಾರ್, ಮೈಸೂರು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣ ಗೌಡ ಹಾಗೂ ಸಂಘದ ಸದಸ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಮಾಜಿ ಸಂಸದರಿಂದ ಸನ್ಮಾನ

ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಗೌರವ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಮ್ಮ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಎಂ.ರಾಜೇಂದ್ರ ಅವರಿಗೆ ಅಭಿನಂದನೆಗಳು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಶುಭ ಹಾರೈಸಿದ್ದಾರೆ. ಅಲ್ಲದೆ, ರಾಜೇಂದ್ರ ಅವರನ್ನು ಸನ್ಮಾನಿಸಿ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ, ಮಾಜಿ ನಗರ ಪಾಲಿಕೆ ಸದಸ್ಯರಾದ ಸುಬ್ಬಯ್ಯ, ಬೊ. ಉಮೇಶ್, ಬಾಲಣ್ಣ, ಶ್ರೀರಾಮ್, ಕಿರಣ್ ಗೌಡ, ಮಹೇಶ್, ಅಶೋಕ್, ಪ್ರಕಾಶ್, ನಮಿತ್, ಲಕ್ಷ್ಮೀಶ ಮತ್ತಿತರರು ಉಪಸ್ಥಿತರಿದ್ದರು.

ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?
ಇದೂ ಓದಿ: ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ನೂತನ ಅಧ್ಯಕ್ಷ ಜಿ.ಕೆ. ಶೆಟ್ಟಿ ಅವರಿಗೆ ಬಿಎಚ್‌ಎ ಅಭಿನಂದನೆ
ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?



