ಹೋಟೆಲ್ ಕನ್ನಡ, ಬೆಂಗಳೂರು: ಆನ್‌ಲೈನ್ ಆಹಾರ ವಿತರಣಾ ವೇದಿಕೆಗಳಾದ ಸ್ವಿಗ್ಗಿ-ಜೊಮ್ಯಾಟೊಗಳಿಂದ ಆಗುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋಟೆಲಿಗರು ಖಡಕ್ ಎಚ್ಚರಿಕೆ ಕೊಟ್ಟ ಪರಿಣಾಮವಾಗಿ ಮಣಿದಿರುವ ಸ್ವಿಗ್ಗಿ ಸಂಸ್ಥೆ ಇದೀಗ ಬೆಂಗಳೂರು ಹೋಟೆಲುಗಳ ಸಂಘದ ಜೊತೆ ಮಹತ್ವದ ಮಾತುಕತೆಗೂ ಮುಂದಾಗಿದೆ.
ಸಮಸ್ಯೆಗಳನ್ನು ಇತ್ಯರ್ಥ ಪಡಿಸುವ ಸಲುವಾಗಿ ಬೆಂಗಳೂರು ಹೋಟೆಲುಗಳ ಸಂಘದ ಜೊತೆ ಸ್ವಿಗ್ಗಿಯ ಉನ್ನತ ಮಟ್ಟದ ನಾಯಕರು ಇದೇ ಆ.7ರ ಶುಕ್ರವಾರ ಸಭೆ ನಡೆಸಲಿದ್ದಾರೆ.
ಇದೂ ಓದಿ: ಸಮಸ್ಯೆ ಬಗೆಹರಿಯದಿದ್ದರೆ ಆ.15ರಿಂದ ಸ್ವಿಗ್ಗಿ-ಜೊಮ್ಯಾಟೊ ಜೊತೆ ಹೋಟೆಲಿಗರ ವ್ಯವಹಾರ ಸಂಪೂರ್ಣ ಬಂದ್
ಈ ಸಭೆಯಲ್ಲಿ ಸ್ವಿಗ್ಗಿ ಎಂ.ಡಿ. ಮತ್ತು ಗ್ರೂಪ್ ಸಿಇಒ ಹರ್ಷ ಮಜೇಟಿ, ಸ್ವಿಗ್ಗಿ ಫುಡ್ ಮಾರ್ಕೆಟ್‌ಪ್ಲೇಸ್ ಸಿಇಒ ರೋಹಿತ್ ಕಪೂರ್ ಹಾಗೂ ನ್ಯಾಷನಲ್ ರೆಸ್ಟೋರೆಂಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎನ್‌ಆರ್‌ಎಐ) ಪ್ರತಿನಿಧಿಗಳು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಇದೂ ಓದಿ: ಹೋಟೆಲ್ ಉದ್ಯಮಿಗಳಿಗೆ ಸ್ಪಂದಿಸಲು ಮೂರು ಸಹಾಯ ಕೇಂದ್ರ ತೆರೆದ ಸ್ವಿಗ್ಗಿ; ಇಲ್ಲಿದೆ ವಿವರ..
ಸ್ವಿಗ್ಗಿ-ಜೊಮ್ಯಾಟೊಗಳ ನೀತಿಯಿಂದಾಗಿ ಎದುರಾಗಿರುವ ಸಮಸ್ಯೆಗಳ ನಿವಾರಣೆಗಾಗಿ ಇತ್ತೀಚೆಗೆ ಹೋಟೆಲಿಗರೆಲ್ಲ ಒಂದಾಗಿ ಸಮಾಲೋಚನೆ ನಡೆಸಿದ್ದಲ್ಲದೆ, ತಮ್ಮ ಸಮಸ್ಯೆಗಳನ್ನು ಇತ್ಯರ್ಥ ಪಡಿಸದಿದ್ದರೆ ಆ.15ರಿಂದ ಸ್ವಿಗ್ಗಿ-ಜೊಮ್ಯಾಟೊ ಸಂಸ್ಥೆಗಳ ಜೊತೆ ವಹಿವಾಟು ಸಂಪೂರ್ಣ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಕಚೇರಿಯಲ್ಲಿ ಸ್ವಿಗ್ಗಿ ಹೆಲ್ಪ್‌ಡೆಸ್ಕ್; ಸದ್ಬಳಕೆ ಮಾಡಿಕೊಳ್ಳುವಂತೆ ವಿನಂತಿ
ಇದರ ಬೆನ್ನಲ್ಲೇ, ರೆಸ್ಟೋರೆಂಟ್‌ಗಳು ಭರಿಸುವ ರಿಯಾಯಿತಿಗಳಿಗಾಗಿ ಜೊಮ್ಯಾಟೊ ಒಟಿಪಿ ಆಧಾರಿತ ಅನುಮೋದನೆ ವ್ಯವಸ್ಥೆ ಜಾರಿಗೆ ತಂದಿದೆ. ಮತ್ತೊಂದೆಡೆ, ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ಹೋಟೆಲಿಗರಿಗೆ ಸ್ಪಂದಿಸಲು ಸ್ವಿಗ್ಗಿ ಸಂಸ್ಥೆ ಬೆಂಗಳೂರು ಹೋಟೆಲುಗಳ ಸಂಘದ ಪ್ರಧಾನ ಕಚೇರಿ ಸೇರಿ ಬೆಂಗಳೂರಿನ ಮೂರು ಕಡೆ ಸಹಾಯ ಕೇಂದ್ರಗಳನ್ನು ತೆರೆದಿದೆ.
ಈ ಎಲ್ಲದರ ಹಿನ್ನೆಲೆಯಲ್ಲಿ ಹೋಟೆಲಿಗರ ಸಮಸ್ಯೆಗಳನ್ನು ಬಗೆಹರಿಸುವ ಪ್ರಕ್ರಿಯೆ ಒಂದು ನಿರ್ಣಾಯಕ ಹಂತಕ್ಕೆ ಬರುವ ಸೂಚನೆಗಳು ಗೋಚರಿಸಿದ್ದು, ಶುಕ್ರವಾರದ ಸಭೆಗೆ ಸಂಬಂಧಿಸಿದಂತೆ ಹೋಟೆಲಿಗರಲ್ಲಿ ಕುತೂಹಲ ಉಂಟಾಗಿದೆ.
ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್‌ಎ ನೂತನ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ
ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ



