ಒಳಗೇನಿದೆ!?

ಸ್ಟಾರ್‌ ಹೋಟೆಲ್‌ಗಳಿಗೆ ಆಹಾರ ಉತ್ಪನ್ನಗಳನ್ನು ಪೂರೈಸುತ್ತಿದ್ದ ಸಂಸ್ಥೆಗಳ ಮೇಲೆ ದಾಳಿ

ಸಾಂಕೇತಿಕ ಚಿತ್ರ

ಹೋಟೆಲ್‌ ಕನ್ನಡ, ಬೆಂಗಳೂರು: ಸ್ಟಾರ್ ಹೋಟೆಲ್‌ಗಳಿಗೆ ಕಳಪೆ ಹಾಗೂ ಅವಧಿ ಮುಗಿಯುವ ಹಂತದಲ್ಲಿರುವ ಆಹಾರ ಪದಾರ್ಥಗಳ ಪೂರೈಕೆ ತಡೆಯುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆಗಸ್ಟ್‌ 8ರ ಶನಿವಾರ ಬೆಂಗಳೂರಿನಾದ್ಯಂತ ಬೃಹತ್ ತಪಾಸಣಾ ಕಾರ್ಯಾಚರಣೆ ನಡೆಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಮಾರ್ಗದರ್ಶನದಲ್ಲಿ ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಸಾಸ್ ಹಾಗೂ ಪಾನೀಯಗಳನ್ನು ಜಪ್ತಿ ಮಾಡಲಾಗಿದೆ.

ಇದೂ ಓದಿ: ಮತ್ತದೇ ಬೇಸರ.. ಮನಸು ಗಾಂಧಿಬಜಾರು.. ಮರಳೀತೇ ನಿತ್ಯೋತ್ಸವ?

ಕಾರ್ಯಾಚರಣೆಯ ಪ್ರಮುಖ ಅಂಶಗಳು

30 ವಿಶೇಷ ತಂಡಗಳ ರಚನೆ: ಬೆಂಗಳೂರು ನಗರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಳಿಗೆಗಳಿಗೆ ಆಹಾರ ಸರಬರಾಜು ಮಾಡುವ ಗೋದಾಮುಗಳನ್ನು ಪರಿಶೀಲಿಸಲು ಅಂಕಿತಾಧಿಕಾರಿಗಳು ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳನ್ನು ಒಳಗೊಂಡ 30 ತಂಡಗಳನ್ನು ನಿಯೋಜಿಸಲಾಗಿತ್ತು.

ಇದೂ ಓದಿ: ಸಮಸ್ಯೆ ಬಗೆಹರಿಯದಿದ್ದರೆ ಆ.15ರಿಂದ ಸ್ವಿಗ್ಗಿ-ಜೊಮ್ಯಾಟೊ ಜೊತೆ ಹೋಟೆಲಿಗರ ವ್ಯವಹಾರ ಸಂಪೂರ್ಣ ಬಂದ್‌

ಗೋದಾಮುಗಳ ಮೇಲೆ ದಾಳಿ: ಬೆಂಗಳೂರಿನ 5-ಸ್ಟಾರ್ ಮತ್ತು 3-ಸ್ಟಾರ್ ಹೋಟೆಲ್‌ಗಳಿಗೆ ಆಹಾರ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರತಿಷ್ಠಿತ ಸಂಸ್ಥೆಗಳಾದ ‘ಕೋಲ್ಡ್‌ಮ್ಯಾನ್ ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್’ ಮತ್ತು ‘ರಾಧಾಕೃಷ್ಣ ಫುಡ್‌ಲ್ಯಾಂಡ್ ಲಿಮಿಟೆಡ್’ ದಾಸ್ತಾನು ಮಳಿಗೆಗಳ ಮೇಲೆ ಹಠಾತ್ ಭೇಟಿ ನೀಡಿ ತಪಾಸಣೆ ನಡೆಸಲಾಗಿದೆ.

ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ

ಜಪ್ತಿಯಾದ ವಸ್ತುಗಳು

  • ಅವಧಿ ಮುಕ್ತಾಯಕ್ಕೆ ಸಮೀಪದಲ್ಲಿದ್ದ ಸುಮಾರು 70 ಕೆ.ಜಿ. ಸೋಯಾ ಸಾಸ್ ಹಾಗೂ ವಿವಿಧ ಬಗೆಯ ಸಾಸ್‌.
  • ಅವಧಿ ಮುಗಿಯುತ್ತಿದ್ದ ಸ್ಟ್ರಾಬೆರಿ ಫ್ಲೇವರ್ ಸೇರಿ ಸುಮಾರು 10 ಲೀಟರ್‌ಗಳಷ್ಟು ವಿವಿಧ ಬಗೆಯ ಪಾನೀಯ.

ಮಾದರಿಗಳ ರವಾನೆ: ತಪಾಸಣೆ ವೇಳೆ 5 ಮಾಂಸದ ಮಾದರಿಗಳು ಹಾಗೂ 13 ಇತರ ಆಹಾರ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ವಿಶ್ಲೇಷಣೆಗೆ ಕಳುಹಿಸಲಾಗಿದೆ. ಈ ಸಂಸ್ಥೆಗಳಲ್ಲಿ ಮಾಂಸವನ್ನು -18°C ಅಥವಾ ಅದಕ್ಕಿಂತ ಕಡಿಮೆ ತಾಪಮಾನದಲ್ಲಿ (ಡೀಪ್‌ ಫ್ರೀಜರ್‌ನಲ್ಲಿ) ಒಂಬತ್ತು ತಿಂಗಳ ಅವಧಿಗೆ ಸಂಗ್ರಹಿಸಿರುವುದು ಕಂಡುಬಂದಿದೆ.

ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?

ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸುವ ಉದ್ದಿಮೆಗಳ ವಿರುದ್ಧ ‘ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ಹಾಗೂ 2011ರ ನಿಯಮಗಳ ಅನ್ವಯ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಇದೂ ಓದಿ: ಹೋಟೆಲ್‌ ಉದ್ಯಮಿಗಳಿಗೆ ಸ್ಪಂದಿಸಲು ಮೂರು ಸಹಾಯ ಕೇಂದ್ರ ತೆರೆದ ಸ್ವಿಗ್ಗಿ; ಇಲ್ಲಿದೆ ವಿವರ..

ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?

ಇದೂ ಓದಿ: ಕೆಲವು ಸ್ಟಾರ್‌ ಹೋಟೆಲ್‌ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ, ಸ್ವಚ್ಛತೆ ಇರದ ಕಿಚನ್!

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ