ಒಳಗೇನಿದೆ!?

ನಂದಿನಿ ಹಾಲಿನ ದರ ಹೆಚ್ಚಿಸುವಂತೆ ಒಕ್ಕೂಟಗಳಿಂದ ಮುಖ್ಯಮಂತ್ರಿ ಅವರಿಗೆ ಮನವಿ

ಹಾಲು ಒಕ್ಕೂಟಗಳ ನಿಯೋಗದಿಂದ ಸಿಎಂಗೆ ಮನವಿ

ಹೋಟೆಲ್‌ ಕನ್ನಡ, ಬೆಂಗಳೂರು: ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್‌ಗೆ 8ರಿಂದ 10 ರೂಪಾಯಿಯಷ್ಟು ಹೆಚ್ಚಿಸುವಂತೆ ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

ಈ ಸಂಬಂಧ ಮಂಗಳವಾರ ವಿಧಾನಸೌಧದಲ್ಲಿ ಶಿವಕುಮಾರ್ ಅವರನ್ನು ಹಾಲು ಒಕ್ಕೂಟಗಳ ನಿಯೋಗ ಭೇಟಿ ಮಾಡಿ ಸಮಾಲೋಚನೆ ನಡೆಸಿತು.  ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ʼಕಳೆದ ಹತ್ತು ವರ್ಷಗಳಲ್ಲಿ ಪಶು ಆಹಾರ ದರದಲ್ಲಿನ ಹೆಚ್ಚಳ, ಪ್ರತಿ ಲೀಟರ್ ಹಾಲು ಉತ್ಪಾದನೆಗೆ ತಗಲುವ ವೆಚ್ಚ, ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದ ಹಾಲು ಒಕ್ಕೂಟ ಹೊರತುಪಡಿಸಿ ಬೇರೆ ಕಡೆ ಮಾರಾಟವಾಗುತ್ತಿದೆ? ಒಕ್ಕೂಟ ಎಷ್ಟು ಖರೀದಿಸುತ್ತಿದೆ? ನೆರೆಯ ರಾಜ್ಯಗಳಲ್ಲಿ ಹಾಲು ಖರೀದಿ ಮತ್ತು ಮಾರಾಟ ದರದ ವಿವರ ಸೇರಿದಂತೆ ಸಮಗ್ರ ಮಾಹಿತಿ ಸಲ್ಲಿಸಿʼ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?

ನಿಯೋಗದ ಪರವಾಗಿ ಮಾತನಾಡಿದ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್, ʼಹೈನುಗಾರಿಕೆಗೆ ಅಗತ್ಯವಿರುವ ಪಶು ಆಹಾರ, ಮೇವು, ಔಷಧೋಪಚಾರ ಸೇರಿದಂತೆ ನಿರ್ವಹಣಾ ವೆಚ್ಚ ನಿರಂತರವಾಗಿ ಹೆಚ್ಚಾಗುತ್ತಿರುವುದರಿಂದ ಹಾಲಿನ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆʼ ಎಂದರು. ಸದ್ಯದ ಬರ ಪರಿಸ್ಥಿತಿಯಲ್ಲಿ ಬೆಳೆ ಕೊರತೆಯಿಂದ ವ್ಯವಸಾಯ ಆದಾಯ ತೀವ್ರ ಕುಸಿದಿದ್ದು, ಮೇವಿನ ಲಭ್ಯತೆ ಕಡಿಮೆ ಆಗಿರುವುದರಿಂದ ಹೈನುಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ವಿವರಿಸಿದರು.

ಇದೂ ಓದಿ:ಮತ್ತದೇ ಬೇಸರ.. ಮನಸು ಗಾಂಧಿಬಜಾರು.. ಮರಳೀತೇ ನಿತ್ಯೋತ್ಸವ?

ವಿವಿಧ ರಾಜ್ಯಗಳ ಸಹಕಾರಿ ಸಂಸ್ಥೆಗಳು ಹಾಗೂ ಖಾಸಗಿ ಡೇರಿಗಳು ನಿರಂತರವಾಗಿ ಹಾಲು ಮತ್ತು ಹಾಲಿನ ಉತ್ಪನ್ನ ದರಗಳನ್ನು ಏರಿಸುತ್ತಿವೆ. ಗ್ರಾಹಕರ ಹಿತದೃಷ್ಠಿಯಿಂದ ಕಳೆದ ಒಂದೂವರೆ ವರ್ಷಗಳಲ್ಲಿ ನಾವು ಹಾಲಿನ ದರ ಹೆಚ್ಚಿಸಿರುವುದಿಲ್ಲ. ಖಾಸಗಿ ಸಂಸ್ಥೆಗಳು ಹೆಚ್ಚಿನ ಹಾಲಿನ ಶೇಖರಣೆಗೆ ಪ್ರಯತ್ನಿಸುತ್ತಿದ್ದು, ಒಕ್ಕೂಟಗಳು ಹಾಲು ಶೇಖರಣೆಗೆ ತೀವ್ರ ಪೈಪೋಟಿ ಎದುರಿಸಬೇಕಾಗಿದೆ ಎಂದು ಹೇಳಿದರು.

ಇದೂ ಓದಿ: ಹೋಟೆಲಿಗರು, ಫಾರ್ಮಸಿಯವರಿಗೆ ಆರೋಗ್ಯ ಸಚಿವರಿಂದ ಮತ್ತೆ ತಾಕೀತು..

ಕರ್ನಾಟಕದಲ್ಲಿ ಒಕ್ಕೂಟವು ಉತ್ಪಾದಕರಿಂದ ಟೋನ್ಡ್ ಹಾಲನ್ನು ಲೀಟರಿಗೆ 35 ರೂಪಾಯಿಯಂತೆ ನೀಡಿ ಖರೀದಿಸುತ್ತಿದ್ದು, ನೆರೆಯ ಆಂಧ್ರಪ್ರದೇಶದಲ್ಲಿ  41.5,  ಕೇರಳದಲ್ಲಿ 41.8, ಮಹಾರಾಷ್ಟ್ರದಲ್ಲಿ 41 ಹಾಗೂ ತಮಿಳುನಾಡಿನಲ್ಲಿ 42.24 ರೂಪಾಯಿಗೆ ಖರೀದಿಸಲಾಗುತ್ತಿದೆ ಎಂದು ವಿವರಿಸಿದರು. ಇದೇ ರೀತಿ ಹಾಲಿನ ಗರಿಷ್ಠ ಮಾರಾಟ ದರದಲ್ಲಿ ಕೂಡ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಲೀಟರಿಗೆ ಕನಿಷ್ಠ 12 ರೂಪಾಯಿಯಷ್ಟು ಕಡಿಮೆ ಇದೆ ಎಂಬುದಾಗಿಯೂ ಹೇಳಿದರು.

ಈ ವೇಳೆ ಸಚಿವರಾದ ಲಕ್ಷ್ಮಣ್‌ ಸವದಿ, ಪುಟ್ಟರಂಗಶೆಟ್ಟಿ, ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌, ಶಾಸಕರಾದ ಶಿವಣ್ಣ, ಎನ್‌. ಶ್ರೀನಿವಾಸ್‌ ಹಾಗೂ ವಿವಿಧೆಡೆಯ ಹೈನುಗಾರರು, ರೈತರು ಉಪಸ್ಥಿತರಿದ್ದರು.

ಇದೂ ಓದಿ: ಮಾಜಿ ಸಚಿವ ದಿನೇಶ್‌ ಗುಂಡೂರಾವ್‌, ಐಎಎಸ್‌ ಅಧಿಕಾರಿ ಜಗದೀಶ್‌ ಅವರಿಂದ ʼಡರ್ಬಿಸ್‌ ಕ್ಲಬ್‌ ಸಂಡೇಸ್‌ʼ ಉದ್ಘಾಟನೆ

ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?

ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ