ಹೋಟೆಲ್ ಕನ್ನಡ, ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ(ಎಫ್ಕೆಸಿಸಿಐ)ದ 2026–27ನೇ ಸಾಲಿನ ಸಮಿತಿಯ ಅಧ್ಯಕ್ಷರಾಗಿ ಹೋಟೆಲ್ ಉದ್ಯಮ ಕ್ಷೇತ್ರದ ಗಣ್ಯರಾದ ಪಿ.ಸಿ.ರಾವ್ ಹಾಗೂ ವೀರೇಂದ್ರ ಎನ್. ಕಾಮತ್ ನೇಮಕಗೊಂಡಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘದ 2026-27ನೇ ಸಾಲಿನ ವಿವಿಧ ಸಮಿತಿಗಳಿಗೆ ನೇಮಕಗೊಂಡ ಪ್ರತಿನಿಧಿಗಳಿಗೆ ಅವರ ಹುದ್ದೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಶುಕ್ರವಾರ ಎಫ್ಕೆಸಿಸಿಐ ಕಚೇರಿಯಲ್ಲಿ ವಿತರಿಸಲಾಗಿದೆ.
ಎಫ್ಕೆಸಿಸಿಐ ಸಂಘಗಳ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್, ಎಫ್ಕೆಸಿಸಿಐ ಕಾರ್ಮಿಕ ಸಮಿತಿ ಅಧ್ಯಕ್ಷರಾಗಿ ಕರ್ನಾಟಕ ಹೋಟೆಲ್ ಮಾಲೀಕರ ಸಂಘದ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ನೇಮಕಗೊಂಡಿದ್ದಾರೆ.
ಎಫ್ಕೆಸಿಸಿಐ ಅಧ್ಯಕ್ಷ ಟಿ. ಸಾಯಿರಾಂ ಪ್ರಸಾದ್ ಅವರು ಶುಕ್ರವಾರ ಇವರಿಬ್ಬರಿಗೂ ಪ್ರಮಾಣಪತ್ರ ಪ್ರದಾನ ಮಾಡಿದರು. ಹೋಟೆಲ್ ಮಾತ್ರವಲ್ಲದೆ ಆತಿಥ್ಯ ಕ್ಷೇತ್ರದ ಇತರ ಸೇವಾ ವಲಯಗಳ ಪ್ರತಿನಿಧಿಗಳಿಗೂ ವಿವಿಧ ಸಮಿತಿಗಳಲ್ಲಿ ಅವಕಾಶ ನೀಡಲಾಗಿದೆ.
ಇದೂ ಓದಿ: ಎಫ್ಕೆಸಿಸಿಐ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಹೊಳ್ಳ ನೇಮಕ
ಇದೂ ಓದಿ: ಎಫ್ಕೆಸಿಸಿಐ ಚುನಾವಣೆಯಲ್ಲಿ ಆತಿಥ್ಯ ಕ್ಷೇತ್ರದ ನಾಲ್ವರು ನಿರ್ದೇಶಕರಾಗಿ ಆಯ್ಕೆ
ಇದೂ ಓದಿ: ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ನೂತನ ಅಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ
ಇದೂ ಓದಿ: ಹತ್ತು ಲಕ್ಷ ರೂ. ಮೌಲ್ಯದ ಚಿನ್ನದ ಸರ ಗ್ರಾಹಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಹೋಟೆಲ್ ಕಾರ್ಮಿಕ
ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್ಗಳಲ್ಲಿದೆಯಾ ‘ಸ್ಥಳ ಮಹಿಮೆʼ?



