ಬೆಂಗಳೂರು: ಭಾರತೀಯ ಜನತಾ ಪಕ್ಷದ ಹಾಲು ಉತ್ಪಾದಕರ ರಾಜ್ಯ ಪ್ರಕೋಷ್ಠದ ಸಂಚಾಲಕರಾಗಿ ಹೋಟೆಲೋದ್ಯಮಿ ಬೇಳೂರು ರಾಘವೇಂದ್ರ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿಯ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ರಾಜ್ಯ ಪ್ರಕೋಷ್ಠಗಳ ಸಂಯೋಜಕ ದತ್ತಾತ್ರೇಯ ಅವರು ಬೇಳೂರು ರಾಘವೇಂದ್ರ ಶೆಟ್ಟಿ ಅವರನ್ನು ಹಾಲು ಉತ್ಪಾದಕರ ಪ್ರಕೋಷ್ಠದ ಸಂಚಾಲಕರನ್ನಾಗಿ ನೇಮಿಸಿ ಶುಭ ಹಾರೈಸಿದರು.
ಪಕ್ಷ ಈ ಹಿಂದೆ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲು ಆದೇಶ ಮಾಡಿದ್ದು, ಆನಂತರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾದ ರಾಜ್ಯ ಸಹ ಉಸ್ತುವಾರಿಯಾಗಿ ಮತ್ತು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಎಲ್ಲ ಮೋರ್ಚಾಗಳ ಪ್ರಮುಖರಾಗಿ ಅವಕಾಶ ಕೊಟ್ಟಿದೆ. ಬಳಿಕ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ದರ್ಜೆಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷನನ್ನಾಗಿ ಸರ್ಕಾರದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ.
ಆ ಕಾರಣದಿಂದ ಭಾರತೀಯ ಜನತಾ ಪಕ್ಷದ ಎಲ್ಲಾ ಹಿರಿಯ ನಾಯಕರಿಗೆ ಹಾಗೂ ಸಂಘ ಪರಿವಾರದ ಎಲ್ಲ ಹಿರಿಯರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು ಮತ್ತು ನನ್ನ ಏಳಿಗೆಗೋಸ್ಕರ ಸದಾ ಕಾಲ ಸ್ಮರಿಸುವ ಸಂಘಟನಾ ಕಾರ್ಯದಲ್ಲಿ ನನ್ನ ಜೊತೆ ಕಾರ್ಯನಿರ್ವಹಿಸಿದ ಹಾಗೂ ಬಿಜೆಪಿಯ ಎಲ್ಲ ಕಾರ್ಯಕರ್ತ ಬಂಧುಗಳಿಗೂ ಮತ್ತು ನನ್ನ ಆತ್ಮೀಯ ಸ್ನೇಹಿತರಿಗೂ ನನ್ನ ಅನಂತಾನಂತ ಧನ್ಯವಾದಗಳು ಎಂದು ಬೇಳೂರು ರಾಘವೇಂದ್ರ ಶೆಟ್ಟಿ ಅವರು ಸಂತೋಷ ಹಂಚಿಕೊಂಡಿದ್ದಾರೆ.
ಸಂಬಂಧಿತ ಸುದ್ದಿ: ಹೋಟೆಲ್ ಕನ್ನಡ: ಇದು ಕನ್ನಡಿಗ, ಕರ್ನಾಟಕದ ಹೋಟೆಲಿಗರ ಸುದ್ದಿದರ್ಶಿನಿ
ಸಂಬಂಧಿತ ಸುದ್ದಿ: ಚಹಾ ಮಾರಿದ್ದೆ, ತಟ್ಟೆ-ಲೋಟ ಕೂಡ ತೊಳೆದಿದ್ದೆ; ಆ ದಿನಗಳನ್ನು ನೆನಪಿಸಿಕೊಂಡ ಪ್ರಧಾನಿ..
ಸಂಬಂಧಿತ ಸುದ್ದಿ: ಪಿ.ಸಿ.ರಾವ್ @ 70: ಅರಮನೆ ಮೈದಾನದಲ್ಲಿ ಜನ್ಮದಿನದ ಅದ್ಧೂರಿ ಸಂಭ್ರಮ