ಬೆಂಗಳೂರು: ಖ್ಯಾತ ಉದ್ಯಮಿ, ಗೋಲ್ಡ್ ಫಿಂಚ್ ಹೋಟೆಲ್ ಮಾಲೀಕ, ಎಂ.ಆರ್.ಜಿ. ಗ್ರೂಪ್ ಮುಖ್ಯಸ್ಥ ಕೆ.ಪ್ರಕಾಶ್ ಶೆಟ್ಟಿ ಅವರು ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ.
ನಾಡು-ನುಡಿ ಅದರಲ್ಲೂ ವಿಶೇಷವಾಗಿ ಕರಾವಳಿಯ ಭಾಷೆ-ಸಂಸ್ಕೃತಿಗೆ ಹಲವು ಕೊಡುಗೆಗಳನ್ನು ನೀಡುತ್ತ ಬಂದಿರುವ ಇವರಿಗೆ ಕುಂದಾಪುರ ಕನ್ನಡ ಪ್ರತಿಷ್ಠಾನವು ಅಭಿನಂದನೆಗಳನ್ನು ಸಲ್ಲಿಸಿದೆ.
ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಭಾಜನರಾದ ಹಿನ್ನೆಲೆಯಲ್ಲಿ ಕೆ.ಪ್ರಕಾಶ್ ಶೆಟ್ಟಿಯವರನ್ನು ಭೇಟಿಯಾದ ಕುಂದಾಪುರ ಕನ್ನಡ ಪ್ರತಿಷ್ಠಾನದ ಪದಾಧಿಕಾರಿಗಳು, ಶೆಟ್ಟರಿಗೆ ಅಭಿನಂದನೆಗಳನ್ನು ವ್ಯಕ್ತಪಡಿಸಿ, ಶುಭ ಹಾರೈಸಿದರು.
ಕುಂದಾಪುರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು, ಯುನಿವರ್ಸಲ್ ಕೋಚಿಂಗ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕ ಆರ್. ಉಪೇಂದ್ರ ಶೆಟ್ಟಿ, ಭಾರ್ಗವ ಬಳಗದ ಅಧ್ಯಕ್ಷ ಅಜಿತ್ ಶೆಟ್ಟಿ ಕಿರಾಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿ: ಹೋಟೆಲ್ ಕನ್ನಡ: ಇದು ಕನ್ನಡಿಗ, ಕರ್ನಾಟಕದ ಹೋಟೆಲಿಗರ ಸುದ್ದಿದರ್ಶಿನಿ
ಸಂಬಂಧಿತ ಸುದ್ದಿ: ಚಹಾ ಮಾರಿದ್ದೆ, ತಟ್ಟೆ-ಲೋಟ ಕೂಡ ತೊಳೆದಿದ್ದೆ; ಆ ದಿನಗಳನ್ನು ನೆನಪಿಸಿಕೊಂಡ ಪ್ರಧಾನಿ..
ಸಂಬಂಧಿತ ಸುದ್ದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್ ಸಾರಿಗೆ ಸಂಘಟನೆಯ ಸ್ಟೇರಿಂಗ್!