ಬೆಂಗಳೂರು: ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ರಿ.) ಇದರ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಜಿ.ಕೆ. ಶೆಟ್ಟಿ ಅವರಿಗೆ ಬೆಂಗಳೂರು ಹೋಟೆಲುಗಳ ಸಂಘ (ರಿ.) ಬುಧವಾರ ಅಭಿನಂದನೆ ಸಲ್ಲಿಸಿದೆ.
ಕೆ.ಆರ್.ರಸ್ತೆಯಲ್ಲಿನ ಶ್ರೇಷ್ಠಭೂಮಿಯಲ್ಲಿರುವ ಬೆಂಗಳೂರು ಹೋಟೆಲುಗಳ ಸಂಘದ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆ ಸಂದರ್ಭದಲ್ಲಿ ಜಿ.ಕೆ. ಶೆಟ್ಟಿ ಅವರಿಗೆ ಅನೌಪಚಾರಿಕವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್, ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ, ಉಪಾಧ್ಯಕ್ಷ ಶಂಕರ್ ಕುಂದರ್, ಗೌರವ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್, ಖಜಾಂಚಿ ಸುಧಾಕರ ಶೆಟ್ಟಿ ಅವರು ಜಿ.ಕೆ. ಶೆಟ್ಟಿ ಅವರನ್ನು ಅಭಿನಂದಿಸಿ, ಶುಭ ಕೋರಿದರು.
ಇತ್ತೀಚೆಗೆ ಆಯ್ಕೆ ಆಗಿರುವ ಬೆಂಗಳೂರು ಹೋಟೆಲುಗಳ ಸಂಘದ ನೂತನ ಕಾರ್ಯಕಾರಿ ಸಮಿತಿಗೆ ಜಿ.ಕೆ.ಶೆಟ್ಟಿ ಅವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಹೋಟೆಲುಗಳ ಸಂಘದ ಜಂಟಿ ಕಾರ್ಯದರ್ಶಿಗಳೂ ಉಪಸ್ಥಿತರಿದ್ದರು.
ಇದೂ ಓದಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಮನವಿ
ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?
ಇದೂ ಓದಿ: ʼಬೃಹತ್ ಬೆಂಗಳೂರು ಹೋಟೆಲುಗಳ ಸಂಘʼಕ್ಕೆ ಮರು ನಾಮಕರಣ; ಹೊಸ ಹೆಸರೇನು?