ಒಳಗೇನಿದೆ!?

ಹಾಲಿನ ದರ ಶೀಘ್ರದಲ್ಲೇ ಏರಿಕೆ ಖಚಿತ; ಎಷ್ಟು ಹೆಚ್ಚಳ, ದರ ಏರಿಕೆಯಿಂದ ಯಾರಿಗೆ ಲಾಭ?

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಂದಿನಿ ಹಾಲಿನ ದರ ಏರಿಕೆ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದೀಗ ಅದನ್ನು ಸಹಕಾರ ಸಚಿವರೇ ಖಚಿತಪಡಿಸಿದ್ದಾರೆ. ಅಲ್ಲದೆ, ಹಾಲಿನ ದರ ಏರಿಕೆಯಿಂದ ಯಾರಿಗೆ ಲಾಭವಾಗಲಿದೆ ಎನ್ನುವುದನ್ನೂ ದೃಢಪಡಿಸಿದ್ದಾರೆ.

ಶೀಘ್ರದಲ್ಲೇ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿ ಏರಿಸಲಾಗುವುದು ಎಂದು ತುಮಕೂರಿನಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಖಚಿತಪಡಿಸಿದ್ದಾರೆ. ಜೊತೆಗೆ ಹಾಲಿನ ದರ ಏರಿಕೆ ಅನಿವಾರ್ಯ ಎಂದೂ ಅವರು ಸಮರ್ಥಿಸಿಕೊಂಡಿದ್ದಾರೆ.

ದರ ಏರಿಕೆ ಸಂಬಂಧ ಸದ್ಯದಲ್ಲೇ ಹಾಲು ಒಕ್ಕೂಟಗಳ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಹಾಲಿನ ಮಾರಾಟ ದರ ಹೆಚ್ಚಳದಿಂದ ರೈತರಿಗೆ ಅನುಕೂಲವಾಗಲಿದೆ ಎಂದಿರುವ ಅವರು ದರ ಏರಿಕೆಯಿಂದ ಯಾರಿಗೆ ಲಾಭ ಎನ್ನುವುದನ್ನೂ ಹೇಳಿದ್ದಾರೆ.

ಹಾಲಿನ ದರ ಏರಿಕೆಯಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಲಾಭ ಆಗಲಿದೆಯೇ ಹೊರತು ರಾಜ್ಯ ಸರ್ಕಾರಕ್ಕಲ್ಲ ಎಂದಿರುವ ಅವರು, ಇಡೀ ದೇಶದಲ್ಲಿ ರೈತರಿಂದ ಹೆಚ್ಚಿನ ಬೆಲೆಗೆ ಹಾಲು ಖರೀದಿಸಿ ಗ್ರಾಹಕರಿಗೆ ಕಡಿಮೆ ದರದಲ್ಲಿ ನೀಡುತ್ತಿರುವ ರಾಜ್ಯ ಕರ್ನಾಟಕ ಮಾತ್ರ ಎಂದೂ ಹೇಳಿದ್ದಾರೆ.

ಇದೂ ಓದಿ: ಒಂದು ಕಪ್‌ ಟೀ ಬೆಲೆ 340 ರೂಪಾಯಿ; ಚಹಾ ದರದ ಅನುಸಾರ ಹಣದುಬ್ಬರ ಅಳೆದ ಮಾಜಿ ಸಚಿವ!

ಇದೂ ಓದಿ: ಹೋಟೆಲಿಗರೇ ಹುಷಾರು: ದಸರಾ-ದೀಪಾವಳಿ ಹಿನ್ನೆಲೆಯಲ್ಲಿ ಎಫ್‌ಎಸ್‌ಎಸ್‌ಎಐ ಹೊರಡಿಸಿದೆ ಹೊಸ ಆದೇಶ

ಇದೂ ಓದಿ: ಹೋಟೆಲ್‌ ಮಾಲೀಕರ ಕುರಿತ ವಿಡಿಯೋ ವೈರಲ್‌, ಮಾಜಿ ಐಪಿಎಸ್‌ ಅಧಿಕಾರಿಯಿಂದ ಕ್ಷಮೆ ಯಾಚನೆ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ