ಬೆಂಗಳೂರು: ಬೆಂಗಳೂರು ಹೋಟೆಲುಗಳ ಸಂಘ (ಬಿಎಚ್‌ಎ) ಹೋಟೆಲ್‌ಗಳ ಕಾಲಾವಧಿ ಕುರಿತಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಮಹತ್ವದ ಮನವಿಯೊಂದನ್ನು ಮಾಡಿಕೊಂಡಿದೆ.
ಹೋಟೆಲ್‌ಗಳನ್ನು ದಿನದ 24 ಗಂಟೆಗಳ ಕಾಲ ತೆರೆದಿಡುವ ಕುರಿತಂತೆ ರಾಜ್ಯ ಸರ್ಕಾರ ಹೋಟೆಲ್ ಉದ್ಯಮಕ್ಕೆ ಈಗಾಗಲೇ ಅನುಮತಿ ನೀಡಿದೆ. ಈ ಸಂಬಂಧ ಗೃಹ ಇಲಾಖೆಯಿಂದಲೂ ಅಧಿಸೂಚನೆ ಹೊರಡಿಸಬೇಕು ಎಂದು ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ಕೋರಿಕೊಂಡಿದ್ದಾರೆ.
ಹೋಟೆಲುಗಳನ್ನು ದಿನದ 24 ಗಂಟೆಗಳ ಕಾಲವೂ ತೆರೆದಿಡುವುದರಿಂದ ಅಗತ್ಯ ಇರುವವರಿಗೆ ಊಟೋಪಚಾರದ ಜೊತೆಗೆ ಉಚಿತವಾಗಿ ಕುಡಿಯುವ ನೀರು ಹಾಗೂ ಶೌಚಗೃಹ ವ್ಯವಸ್ಥೆ ಒದಗಿಸಲಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಬಹಳಷ್ಟು ಅನುಕೂಲ ಆಗುತ್ತದೆ. ಹೀಗಾಗಿ ಹೋಟೆಲ್‌ಗಳನ್ನು ದಿನದ 24 ಗಂಟೆಗಳ ಕಾಲ ತೆರೆದಿಡುವ ಸಂಬಂಧ ಗೃಹ ಇಲಾಖೆಯಿಂದ ಅಧಿಸೂಚನೆ ಹೊರಡಿಸಬೇಕು ಎಂದು ಬಿಎಚ್‌ಎ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ ಮನವಿ ಮಾಡಿಕೊಂಡಿದ್ದಾರೆ.
ಇದೂ ಓದಿ: ಸರ್ಕಾರ ಅಂದುಕೊಂಡಿದ್ದಕ್ಕಿಂತಲೂ ದೊಡ್ಡದಿದೆ ಹೋಟೆಲ್ ಕ್ಷೇತ್ರದ ಗಾತ್ರ-ಸಾಮರ್ಥ್ಯ: ಪ್ರದೀಪ್ ಶೆಟ್ಟಿ
ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್‌ಎ ನೂತನ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಹೊಳ್ಳ
ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್ ಸಾರಿಗೆ ಸಂಘಟನೆಯ ಸ್ಟೇರಿಂಗ್!