ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅದರಲ್ಲೂ ಗಾಂಧಿನಗರದಲ್ಲಿ ಹೋಟೆಲ್ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಆಹಾರ ಸಚಿವ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತರಲಾಗಿದೆ. ಗಾಂಧಿನಗರ ʼರಸಪಾಕʼ ಹೋಟೆಲ್ ಮಾಲೀಕರಾದ ರೂಪಾ ಶಾಸ್ತ್ರಿ ಅವರು ಈ ಕಾರ್ಯವನ್ನು ಮಾಡಿದ್ದಾರೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜುಲೈ 11ರ ಶುಕ್ರವಾರ ಹಮ್ಮಿಕೊಂಡಿದ್ದ ಜನಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡ ರೂಪಾ ಅವರು, ಹೋಟೆಲಿಗರ ಸಮಸ್ಯೆಗಳ ಕುರಿತು ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಹೋಟೆಲ್ ಮಾಲೀಕರ ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ಜನಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಎಲ್ಲ ವಿಭಾಗಗಳ ಮೇಲಧಿಕಾರಿಗಳು ಹಾಗೂ ಬಹಳಷ್ಟು ಸಾರ್ವಜನಿಕರು ಭಾಗವಹಿಸಿದ್ದರು.
ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?
ಇದೂ ಓದಿ: ನಾಡಿದ್ದು ರಾಜ್ಯಾದ್ಯಂತ ಬಾರ್ಗಳು ಬಂದ್; ಆತಿಥ್ಯ ಉದ್ಯಮ ಕ್ಷೇತ್ರದಿಂದ ಬೃಹತ್ ಪ್ರತಿಭಟನೆ
ಇದೂ ಓದಿ: ರಜತಗಿರಿ ಪ್ಯಾಲೇಸ್ನಲ್ಲಿ ವಾರಪೂರ್ತಿ ಹಲಸಿನ ಖಾದ್ಯ ಮೇಳ; ಇಲ್ಲಿದೆ ಪೂರ್ತಿ ವಿವರ..



