ಒಳಗೇನಿದೆ!?

ಬಾರ್‌ & ರೆಸ್ಟೋರೆಂಟ್‌ ಮಾಲೀಕರಿಗೆ ಶೂಟ್‌ ಮಾಡಿದ್ದ ವ್ಯಕ್ತಿಯ ಬಂಧನ

ಹೋಟೆಲ್‌ ಕನ್ನಡ, ಬೆಂಗಳೂರು: ರಾಜಧಾನಿ ಬೆಂಗಳೂರಿನ ಬಾರ್‌ & ರೆಸ್ಟೋರೆಂಟ್‌ ಮಾಲೀಕರಿಗೆ ಶೂಟ್‌ ಮಾಡಿದ್ದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸವನಗುಡಿಯ ಕೃಷ್ಣರಾವ್‌ ಪಾರ್ಕ್‌ ಬಳಿಯ ನಿವಾಸಿ ಮೊಹಮ್ಮದ್‌ ಅಫ್ಜಲ್‌ ಬಂಧಿತ ವ್ಯಕ್ತಿ.

ಬಂಧಿತ ವ್ಯಕ್ತಿ ಏರ್‌ಗನ್‌ನಿಂದ ಶೂಟ್‌ ಮಾಡಿದ್ದ ಗುಂಡು ಬಸವನಗುಡಿಯ ನರ್ತಕಿ ಮತ್ತು ಕಾರ್ಗಿಲ್‌ ಬಾರ್‌ & ರೆಸ್ಟೋರೆಂಟ್‌ ಮಾಲೀಕ ರಾಜಗೋಪಾಲ್‌ ಅವರಿಗೆ ತಗುಲಿ ಕುತ್ತಿಗೆಗೆ ಗಾಯವಾದ ಪ್ರಕರಣದಲ್ಲಿ ಈ ಬಂಧನ ನಡೆದಿದೆ. ನಗರದ ಕಾನೂನು ಕಾಲೇಜೊಂದರ ಎಲ್‌ಎಲ್‌ಬಿ ವಿದ್ಯಾರ್ಥಿಯಾದ ಮೊಹಮ್ಮದ್‌ನನ್ನು ಠಾಣೆಯಲ್ಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘಕ್ಕೆ ಮೂರೇ ತಿಂಗಳಲ್ಲಿ 30ಕ್ಕೂ ಹೆಚ್ಚು ಹೋಟೆಲ್‌ಗಳ ಸೇರ್ಪಡೆ

ರಾಜಗೋಪಾಲ್‌ ಅವರು ಡಿಸೆಂಬರ್‌ 10ರ ರಾತ್ರಿ 7.45ರ ಸುಮಾರಿಗೆ ಕೃಷ್ಣರಾವ್‌ ಪಾರ್ಕ್‌ನಲ್ಲಿ ವಾಕಿಂಗ್‌ ಮಾಡುತ್ತಿದ್ದಾಗ ಈ ಘಟನೆ ನಡೆದಿತ್ತು. ಮೊಹಮ್ಮದ್‌ ತನ್ನ ಮನೆಯ ಟೆರೇಸ್‌ನಲ್ಲಿ ಏರ್‌ಗನ್‌ ಅಭ್ಯಾಸ ನಡೆಸುತ್ತಿದ್ದಾಗ ಹಾರಿದ ಗುಂಡು ಆಕಸ್ಮಿಕವಾಗಿ ರಾಜಗೋಪಾಲ್‌ ಅವರಿಗೆ ತಗುಲಿತ್ತು.

ಇದೂ ಓದಿ: ಅಯೋಧ್ಯೆಯಲ್ಲಿ ‘ಬೆಂಗಳೂರು ಕೆಫೆ’: ರಾಮ ಜನ್ಮಭೂಮಿಯಲ್ಲಿ ಈಗ ಉಡುಪಿಯ ನೈಜ ರುಚಿಯ ಹೋಟೆಲ್

ರಾಜಗೋಪಾಲ್‌ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಪ್ರೆಸ್ಟೀಜ್‌ ಸುಕ್ರಿ ಸೆರೆನಿಟಿ ಅಪಾರ್ಟ್‌ಮೆಂಟ್‌ನಲ್ಲಿ ಮೊಹಮ್ಮದ್‌ನನ್ನು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಮೊಹಮ್ಮದ್‌ ಮನೆಯಲ್ಲಿ ಮೂರು ಏರ್‌ಗನ್‌ನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮೇಗೌಡ ತಿಳಿಸಿದ್ದಾರೆ.

ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?

ಇದೂ ಓದಿ: ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ಕುಂದಾಪುರದವರ ʼಉಡುಪಿ ಕೆಫೆʼ; ದ ಬೆಸ್ಟ್‌ ಹೋಟೆಲ್‌ ಎಂಬ ಮೆಚ್ಚುಗೆ

ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್‌ಎ ನೂತನ ಅಧ್ಯಕ್ಷ ಎಚ್‌.ಎಸ್. ಸುಬ್ರಹ್ಮಣ್ಯ ಹೊಳ್ಳ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ