ಹೋಟೆಲ್ ಕನ್ನಡ, ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೇಕರಿ-ಕಾಂಡಿಮೆಂಟ್ಸ್ ಮಾಲೀಕರು ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಕೈಗೊಂಡ ಭಾರಿ ಪ್ರತಿಭಟನೆ ಯಶಸ್ವಿಯಾಗಿದ್ದು, ಅದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ.ಖಾದರ್ ಸ್ಪಂದಿಸಿದ್ದಾರೆ. ಅಲ್ಲದೆ, ಬೇಕರಿ-ಕಾಂಡಿಮೆಂಟ್ಸ್ ಮತ್ತಿತರೆ ಅಂಗಡಿ ಮುಂಗಟ್ಟುಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಆರೋಗ್ಯ ಮತ್ತು ಪೊಲೀಸ್ ಇಲಾಖೆಯಿಂದ ಆಗುತ್ತಿರುವ ಕಿರುಕುಳ ತಪ್ಪಿಸಲು ಶೀಘ್ರದಲ್ಲೇ ಸಭೆ ಕರೆಯುವುದಾಗಿಯೂ ಅವರು ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಮಿಕ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಬೇಕರಿ-ಕಾಂಡಿಮೆಂಟ್ಸ್ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಆರೋಗ್ಯ ಮತ್ತು ಪೊಲೀಸ್ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ಕುರಿತು ಸಭೆ ಕರೆದು ಚರ್ಚಿಸಿ ಸೂಕ್ತ ಪರಿಹಾರ ರೂಪಿಸುವುದಾಗಿ ಹೇಳಿದರು.
ಇದೂ ಓದಿ: ಹೋಟೆಲೋದ್ಯಮಿಯ ನೇತೃತ್ವದಲ್ಲಿ ಬೃಹತ್ ದೇವತಾ ಕಾರ್ಯ, ನೀಲನಕ್ಷೆ ಅನಾವರಣ
ಸಣ್ಣ ಉದ್ದಿಮೆದಾರರ 27 ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಿರುಕುಳ ಮುಂದುವರಿದರೆ ಹೋರಾಟ ತೀವ್ರಗೊಳಿಸುತ್ತೇವೆ. ನಮ್ಮ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಕಾರ್ಮಿಕ ಪರಿಷತ್ತಿನ ಅಧ್ಯಕ್ಷ ರವಿಶೆಟ್ಟಿ ಬೈಂದೂರು ಆಗ್ರಹಿಸಿದ್ದಾರೆ.

ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?
ಸಣ್ಣ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದಂಡದ ಹಾವಳಿ, ಅಧಿಕಾರಿಗಳ ಕಿರುಕುಳ, ಪರವಾನಗಿ ಸಮಸ್ಯೆಗಳಿಂದಾಗಿ ಅವರ ಜೀವನೋಪಾಯಕ್ಕೆ ಧಕ್ಕೆಯಾಗುತ್ತಿದೆ. ವ್ಯಾಪಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿಮಾರ್ಣವಾಗಿದೆ ಎಂದೂ ರವಿ ಶೆಟ್ಟಿ ಆತಂಕ ವ್ಯಕ್ತಪಡಿಸಿದರು.

ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್ ಸಾರಿಗೆ ಸಂಘಟನೆಯ ಸ್ಟೇರಿಂಗ್!
ಕರ್ನಾಟಕ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿ ಶೆಟ್ಟಿ ಬೈಂದೂರು, ಮಹಿಳಾ ಘಟಕದ ಅಧ್ಯಕ್ಷೆ ಪೂಜಾ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಮರನಾಥ ಶೆಟ್ಟಿ, ಬೇಳೂರು ರಾಘವೇಂದ್ರ ಶೆಟ್ಟಿ, ಪತ್ರಕರ್ತರಾದ ವಸಂತ್ ಗಿಳಿಯಾರ್, ಗಂಡಸಿ ಸದಾನಂದ ಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಬೇಕರಿ-ಕಾಂಡಿಮೆಂಟ್ಸ್ ಮಾಲೀಕರು-ಕಾರ್ಮಿಕರು ಉಪಸ್ಥಿತರಿದ್ದರು.

ಇದೂ ಓದಿ: ಆಹಾರ ತಯಾರಕರಿಗೆ ಎಫ್‌ಎಸ್‌ಎಸ್‌ಎಐನಿಂದ ಮತ್ತೊಂದು ಮಹತ್ವದ ಆದೇಶ
ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?
ಇದೂ ಓದಿ: ಫೀನಿಕ್ಸ್‌ನಂತೆ ಮತ್ತೆ ಎದ್ದು ನಿಂತ ‘ಶುದ್ಧ ತಿಂಡಿ’: ಸುಟ್ಟು ಹೋಗಿದ್ದ ಹೋಟೆಲ್ ಮರು ಆರಂಭ



