ಹೋಟೆಲ್ ಕನ್ನಡ, ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಹೋಟೆಲ್-ರೆಸ್ಟೋರೆಂಟ್‌ಗಳು ಬೆಳಗಿನ ಜಾವ 3.30ರ ವರೆಗೂ ತೆರೆದಿರಲಿವೆ. ಅಮೆರಿಕ, ಕೆನಡ ಮತ್ತು ಮೆಕ್ಸಿಕೋಗಳಲ್ಲಿ ಜಂಟಿಯಾಗಿ ಆಯೋಜಿಸಲಾಗಿರುವ 2026ರ ಫಿಫಾ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಗಳ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೋಟೆಲ್-ರೆಸ್ಟೋರೆಂಟ್ಸ್ ತೆರೆದಿರುವ ಅವಧಿ ವಿಸ್ತರಿಸಲಾಗಿದೆ.
ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ (ಎನ್‌ಆರ್‌ಎಐ) ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಈ ಕುರಿತು ಮಹತ್ವದ ಆದೇಶ ಹೊರಡಿಸಿದ್ದಾರೆ. ಅಂದಹಾಗೆ ಈ ವಿಸ್ತರಿತ ಕಾಲಾವಧಿ ಮೂರು ದಿನಗಳಿಗೆ ಸೀಮಿತವಾಗಿರಲಿದೆ.
ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?
ಸಾಮಾನ್ಯವಾಗಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೋಟೆಲ್-ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವೆ ಒದಗಿಸಲು ಬೆಳಗಿನ ಜಾವ 1 ಗಂಟೆವರೆಗೆ ಮಾತ್ರ ಅವಕಾಶ ಇದೆ. ಆದರೆ ಸದ್ಯ ಸಾರ್ವಜನಿಕರು ಮತ್ತು ಫುಟ್‌ಬಾಲ್ ಅಭಿಮಾನಿಗಳ ಅನುಕೂಲಕ್ಕಾಗಿ ಆಹಾರ ಸೇವೆಗಳ ಅವಧಿ ಬೆಳಗಿನ ಜಾವ 3:30 ರವರೆಗೆ ವಿಸ್ತರಿಸಲು ಅನುಮತಿ ನೀಡಲಾಗಿದೆ.
ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?
ಈ ಆದೇಶವು ಜುಲೈ 14ರಂದು ಜಾರಿಗೆ ಬಂದಿದ್ದು, ಜುಲೈ 15 ಮತ್ತು 19ರಂದು ಕೂಡ ಈ ಆದೇಶ ಅನ್ವಯಿಸಲಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?
ಇದೂ ಓದಿ: ಹೋಟೆಲೋದ್ಯಮಿಯ ನೇತೃತ್ವದಲ್ಲಿ ಬೃಹತ್ ದೇವತಾ ಕಾರ್ಯ, ನೀಲನಕ್ಷೆ ಅನಾವರಣ
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ



