ಹೋಟೆಲ್ ಕನ್ನಡ, ಬೆಂಗಳೂರು: ಇ-ಕಾಮರ್ಸ್ ಆಹಾರ ವಿತರಣಾ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಜೊಮ್ಯಾಟೊಗಳಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿರುವ ಹೋಟೆಲ್ ಮಾಲೀಕರು, ಅದನ್ನು ಎದುರಿಸಲು ಇಂದು ಸಮಾಲೋಚನಾ ಸಭೆ ಹಮ್ಮಿಕೊಂಡಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ಸ್ವಾತಿ ರೆಸ್ಟೋರೆಂಟ್ನಲ್ಲಿ ಜುಲೈ 28ರ ಸಂಜೆ 4 ಗಂಟೆಗೆ ಈ ಸಮಾಲೋಚನಾ ಸಭೆ ನಡೆಯಲಿದೆ. ಸ್ವಿಗ್ಗಿ-ಜೊಮ್ಯಾಟೊ ಸಂಸ್ಥೆಗಳ ಕಮಿಷನ್ ದಂಧೆ ವಿರುದ್ಧ ಸಮಾಲೋಚಿಸಿ ಮುಂದಿನ ನಿಲುವು ತಳೆಯಲು ಈ ಸಭೆ ಹಮ್ಮಿಕೊಳ್ಳಲಾಗಿದೆ.
ಸ್ವಿಗ್ಗಿ-ಜೊಮ್ಯಾಟೊ ವಿಧಿಸುತ್ತಿರುವ ಅತಿಯಾದ ಕಮಿಷನ್, ಅಸಮರ್ಪಕ ಪಾವತಿ ವ್ಯವಸ್ಥೆ ಹಾಗೂ ಪೂರ್ವ ಮಾಹಿತಿ ನೀಡದೆ ಏಕಾಏಕಿ ಪಾವತಿಯಲ್ಲಿ ಕಡಿತ ಮಾಡುತ್ತಿರುವ ಕ್ರಮದಿಂದ ಹೋಟೆಲ್ ಉದ್ಯಮಿಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದೂ ಓದಿ: ʼಬ್ರಾಹ್ಮಣರ ಕಾಫಿ ಬಾರ್ʼ ನನ್ನ ಬದುಕಿನ ಗತಿ ಬದಲಿಸಿದ ಸ್ಥಳ: ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್
ಈ ಬೆಳವಣಿಗೆಯಿಂದ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಇ-ಕಾಮರ್ಸ್ ಸೇವೆಗಳ ಮೂಲಕ ಆಹಾರವನ್ನು ಆರ್ಡರ್ ಮಾಡುವ ಗ್ರಾಹಕರ ಮೇಲೆಯೂ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ಈ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಬೆಂಗಳೂರು ಹೋಟೆಲ್ ಉದ್ಯಮಿಗಳ ಸಮಾಲೋಚನಾ ಸಭೆ ಆಯೋಜಿಸಲಾಗಿದೆ.
ಇದೂ ಓದಿ: ʼಹಳ್ಳಿಮನೆʼ ಸಂಜೀವ ರಾವ್ ಅವರಿಗೆ ʼಬಿಎಚ್ಎ ಜೀವಮಾನದ ಸಾಧನೆ ಪ್ರಶಸ್ತಿʼ
ರಾಜಾಜಿನಗರದ ಸ್ವಾತಿ ಹೋಟೆಲ್ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಹೋಟೆಲ್ ಉದ್ಯಮಿಗಳು, ಹಿತೈಷಿಗಳು ಹಾಗೂ ಸಂಬಂಧಿತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೊಟೇಲ್ ಉದ್ಯಮಿಗಳಾದ ನವೀನ್ ಶೆಟ್ಟಿ ಐರ್ಬೈಲು, ಅಜಿತ್ ಶೆಟ್ಟಿ ಕಿರಾಡಿ ಹಾಗೂ ಹರೀಶ್ ಶೆಟ್ಟಿ ಅರೆಶಿರೂರು ಮನವಿ ಮಾಡಿದ್ದಾರೆ.
ಸಂಪರ್ಕ ಸಂಖ್ಯೆಗಳು: 9900644644, 9844015081, 9591843474
ಇದೂ ಓದಿ: ವಿದ್ಯಾರ್ಥಿ ಭವನದ ಎದುರು ʼಇಡ್ಲಿ-ಸಾಂಬಾರ್, ದೋಸೆ-ಚಟ್ನಿʼಯಲ್ಲೇ ಯೋಗರಾಜ್ ಭಟ್ಟರ ಸಂಗೀತ ಪಾಕ!
ಇದೂ ಓದಿ: ಹೋಟೆಲ್-ಪ್ರವಾಸೋದ್ಯಮ ಕ್ಷೇತ್ರದ ಗಣ್ಯರ ಜೊತೆ ಚರ್ಚಿಸಿದ ಸಿಎಂ; ಇಲ್ಲಿದೆ ಸಂಪೂರ್ಣ ವಿವರ..
ಇದೂ ಓದಿ: ಹೋಟೆಲೋದ್ಯಮಿಯ ನೇತೃತ್ವದಲ್ಲಿ ಬೃಹತ್ ದೇವತಾ ಕಾರ್ಯ, ನೀಲನಕ್ಷೆ ಅನಾವರಣ



