ಹೋಟೆಲ್ ಕನ್ನಡ, ಬೆಂಗಳೂರು: ಆನ್‌ಲೈನ್ ಆಹಾರ ವಿತರಣಾ ವೇದಿಕೆಗಳಿಂದ ಆಗುತ್ತಿರುವ ಸಮಸ್ಯೆಗಳಿಗೆ ಹೋಟೆಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ʼಸ್ವಿಗ್ಗಿʼ ಸಂಸ್ಥೆ ಬೆಂಗಳೂರು ಹೋಟೆಲುಗಳ ಸಂಘದ ಕಚೇರಿಯಲ್ಲಿ ಸಹಾಯ ಕೇಂದ್ರ ತೆರೆದಿದೆ.
ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್ ಸಾರಿಗೆ ಸಂಘಟನೆಯ ಸ್ಟೇರಿಂಗ್!
ʼಬೆಂಗಳೂರು ಹೋಟೆಲುಗಳ ಸಂಘದ ಕಚೇರಿಯಲ್ಲಿ ಸ್ವಿಗ್ಗಿ ಹೆಲ್ಪ್ ಡೆಸ್ಕ್ ಕಳೆದ ಐದು ದಿನಗಳಿಂದ ಕಾರ್ಯನಿರ್ವಹಿಸುತ್ತಿದ್ದು ಬೆಳಗಿನಿಂದ ಸಂಜೆಯವರೆಗೆ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ 147 ಹೋಟೆಲು ಮಾಲೀಕರು ಬಿಎಚ್‌ಎ ಕಚೇರಿಗೆ ಬಂದು ತಮ್ಮ ಲೆಕ್ಕ ಪರಿಶೀಲಿಸಿದ್ದಾರೆ. ಪರಿಣಾಮವಾಗಿ ಬಹಳಷ್ಟು ಜನರಿಗೆ ಹಣ ವಾಪಸ್ ಬರುತ್ತಿದೆʼ ಎಂದು ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.
ಇದೂ ಓದಿ: ಸಮಸ್ಯೆ ಬಗೆಹರಿಯದಿದ್ದರೆ ಆ.15ರಿಂದ ಸ್ವಿಗ್ಗಿ-ಜೊಮ್ಯಾಟೊ ಜೊತೆ ಹೋಟೆಲಿಗರ ವ್ಯವಹಾರ ಸಂಪೂರ್ಣ ಬಂದ್
ʼಇತರ ಹೋಟೆಲ್ ಮಾಲೀಕರು ಕೂಡ ಏನಾದರೂ ತೊಂದರೆಗಳಿದ್ದರೆ ಆದಷ್ಟು ಬೇಗ ಬಿಎಚ್‌ಎ ಸಂಘದ ಕಚೇರಿಗೆ ಬಂದು ಇಲ್ಲಿನ ಸ್ವಿಗ್ಗಿ ಸಹಾಯ ಕೇಂದ್ರದಲ್ಲಿ ಬಗೆಹರಿಸಿಕೊಳ್ಳಬಹುದು. ಈ ಹೆಲ್ಪ್ ಡೆಸ್ಕ್ ಆ.14ರವರೆಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿದೆ. ಹೋಟೆಲ್ ಮಾಲೀಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕುʼ ಎಂದು ಪಿ.ಸಿ.ರಾವ್ ತಿಳಿಸಿದ್ದಾರೆ.
ಇದೂ ಓದಿ: ಹೋಟೆಲೋದ್ಯಮಿಯ ನೇತೃತ್ವದಲ್ಲಿ ಬೃಹತ್ ದೇವತಾ ಕಾರ್ಯ, ನೀಲನಕ್ಷೆ ಅನಾವರಣ
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ
ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?
ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?



