ಹೋಟೆಲ್ ಕನ್ನಡ, ಬೆಂಗಳೂರು: ಬೆಂಗಳೂರು ಹೋಟೆಲುಗಳ ಸಂಘ(ಬಿಎಚ್ಎ) ಎಂದಿನಂತೆ ರಾಜಧಾನಿ ಬೆಂಗಳೂರಿನ ಹೊಟೇಲ್ ಉದ್ಯಮಿಗಳು ಮತ್ತು ಆಹಾರ ತಯಾರಕರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ವತಿಯಿಂದ ಸೋಮವಾರ FoSTaC (ಫುಡ್ ಸೇಫ್ಟಿ ಟ್ರೈನಿಂಗ್ ಆ್ಯಂಡ್ ಸರ್ಟಿಫಿಕೇಷನ್) ವಿಶೇಷ ತರಬೇತಿ ಕಾರ್ಯಾಗಾರ ಆಯೋಜಿಸಿತ್ತು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಕಚೇರಿಯ 2ನೇ ಮಹಡಿಯ ಟ್ಯಾಲಿ ಹಾಲ್ನಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಹೋಟೆಲ್ ಹಾಗೂ ಇತರ ಆಹಾರ ಉದ್ಯಮ ಕ್ಷೇತ್ರದ ನೂರು ಮಂದಿ ಭಾಗವಹಿಸಿದ್ದಾರೆ.
ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್ಗಳಲ್ಲಿದೆಯಾ ‘ಸ್ಥಳ ಮಹಿಮೆʼ?
ಬೆಂಗಳೂರು ಹೋಟೆಲುಗಳ ಸಂಘ ನಿಯಮಿತವಾಗಿ ಈ ಕಾರ್ಯಾಗಾರವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಇದೇ 27ನೇ ತಾರೀಕಿಗೆ ಇನ್ನೊಂದು ಕಾರ್ಯಾಗಾರವನ್ನು ಹಮ್ಮಿಕೊಂಡಿದೆ. ಬೆಂಗಳೂರು ಹೋಟೆಲುಗಳ ಸಂಘದ ಈ ಕಾರ್ಯಾಗರದಲ್ಲಿ ಈವರೆಗೆ ಸುಮಾರು ಒಂದು ಸಾವಿರ ಮಂದಿ ಭಾಗವಹಿಸಿ ಪ್ರಮಾಣಪತ್ರ ಪಡೆದಿದ್ದಾರೆ.
ಇದೂ ಓದಿ: ಆಹಾರ ತಯಾರಕರಿಗೆ ಎಫ್ಎಸ್ಎಸ್ಎಐನಿಂದ ಮತ್ತೊಂದು ಮಹತ್ವದ ಆದೇಶ
ಈ ಕಾರ್ಯಾಗಾರ ವೇಳೆ ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್, ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಹೊಳ್ಳ, ಗೌರವ ಕಾರ್ಯದರ್ಶಿ ಎನ್.ವೀರೇಂದ್ರ ಕಾಮತ್ ಮುಂತಾದವರು ಉಪಸ್ಥಿತರಿದ್ದರು.
ಇದೂ ಓದಿ: ಬಿಬಿಎಚ್ಎನಿಂದ 500ಕ್ಕೂ ಅಧಿಕ ಮಂದಿಗೆ ಎಫ್ಎಸ್ಎಸ್ಎಐ ಫಾಸ್ಟ್ಯಾಕ್ ಟ್ರೇನಿಂಗ್

ಬೆಂಗಳೂರು ಹೋಟೆಲುಗಳ ಸಂಘ ನಿಯಮಿತವಾಗಿ ಆಯೋಜಿಸುವ ಈ ಫಾಸ್ಟ್ಯಾಕ್ ಕಾರ್ಯಾಗಾರದಲ್ಲಿ ಭಾಗಿಯಾಗಲು ಬಯಸುವವರು ಈ ವಾಟ್ಸ್ಯಾಪ್ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
ಇದೂ ಓದಿ: ಎಫ್ಎಸ್ಎಸ್ಎಐ ಪ್ರಮಾಣಪತ್ರಗಳಿಗಿನ್ನು ನವೀಕರಣ ಅನಗತ್ಯ; ಒಮ್ಮೆ ಪಡೆದರೆ ಜೀವಿತಾವಧಿ ಮಾನ್ಯತೆ
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ
ಇದೂ ಓದಿ: ಅಮೆರಿಕದ ಪಿಟ್ಸ್ಬರ್ಗ್ನಲ್ಲಿ ಕುಂದಾಪುರದವರ ʼಉಡುಪಿ ಕೆಫೆʼ; ದ ಬೆಸ್ಟ್ ಹೋಟೆಲ್ ಎಂಬ ಮೆಚ್ಚುಗೆ



