ಒಳಗೇನಿದೆ!?

ಬೆಂಗಳೂರು ಹೊಟೇಲುಗಳ ಸಂಘದಿಂದ ‘FSSAI FOSTAC’ ಕಾರ್ಯಾಗಾರ;ʼ ನೋಂದಣಿಗೆ ಇಲ್ಲಿದೆ ಲಿಂಕ್

ಹೋಟೆಲ್‌ ಕನ್ನಡ, ಬೆಂಗಳೂರು: ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಪ್ರಜ್ಞೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಹೊಟೇಲುಗಳ ಸಂಘ (ರಿ.) ನಿಯಮಿತವಾಗಿ ‘FSSAI FOSTAC’ ತರಬೇತಿ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದ್ದು, ಮುಂದಿನ ಕಾರ್ಯಾಗಾರ ಇದೇ 21ರಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ.

ಇದೂ ಓದಿ: ಮತ್ತದೇ ಬೇಸರ.. ಮನಸು ಗಾಂಧಿಬಜಾರು.. ಮರಳೀತೇ ನಿತ್ಯೋತ್ಸವ?

ಫಾಸ್ಟ್ಯಾಕ್‌ ಕಾರ್ಯಾಗಾರಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಬಿಎಚ್‌ಎ ಈ ಕಾರ್ಯಾಗಾರವನ್ನು ಸೋಮವಾರ ಎರಡು ಅವಧಿಗಳಲ್ಲಿ ನಡೆಸಲಿದೆ. ಪ್ರತಿ ಕಾರ್ಯಾಗಾರವು ಎರಡು ಗಂಟೆಗಳ ಅವಧಿಯದ್ದಾಗಿದ್ದು, ಒಂದು ಕಾರ್ಯಾಗಾರ ಬೆಳಗ್ಗೆ 9.30ಕ್ಕೆ ಆರಂಭವಾದರೆ, ಇನ್ನೊಂದು ಮಧ್ಯಾಹ್ನ 2ಕ್ಕೆ ಆರಂಭವಾಗಿ 4 ಗಂಟೆಗೆ ಮುಗಿಯಲಿದೆ.

ಇದೂ ಓದಿ: ಹೋಟೆಲ್‌ ಕನ್ನಡ: ಇದು ಕನ್ನಡಿಗ, ಕರ್ನಾಟಕದ ಹೋಟೆಲಿಗರ ಸುದ್ದಿದರ್ಶಿನಿ

ಬೆಂಗಳೂರು ಹೋಟೆಲುಗಳ ಸಂಘ(ಬಿಎಚ್‌ಎ) ಸದಸ್ಯರು ಈ ಕಾರ್ಯಾಗಾರದ ಸದ್ಬಳಕೆ ಮಾಡಿಕೊಳ್ಳುವಂತೆ ಸಂಘ ಮನವಿ ಮಾಡಿಕೊಂಡಿದೆ. ಆಸಕ್ತರು ಸಂಘದ ಕಚೇರಿಗೆ ಕರೆ ಮಾಡಿ ಮುಂಚಿತವಾಗಿ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂಬುದಾಗಿ ಬಿಎಚ್‌ಎ ಗೌರವಾಧ್ಯಕ್ಷ ಪಿ.ಸಿ.ರಾವ್‌, ಅಧ್ಯಕ್ಷ ಎಚ್‌.ಎಸ್.ಸುಬ್ರಹ್ಮಣ್ಯ ಹೊಳ್ಳ, ಗೌರವ ಕಾರ್ಯದರ್ಶಿ ವೀರೇಂದ್ರ ಎನ್.‌ ಕಾಮತ್‌ ತಿಳಿಸಿದ್ದಾರೆ.

ಕಾರ್ಯಾಗಾರ ನಡೆಯುವ ಸ್ಥಳ: ಬೆಂಗಳೂರು ಹೋಟೆಲುಗಳ ಸಂಘದ ಕಚೇರಿ, #87, ಮೂರನೇ ಮಹಡಿ, ಯುನಿಟ್ ಸಂಖ್ಯೆ 307, ಕೆ.ಆರ್. ರಸ್ತೆ, ವಿ.ವಿ. ಪುರಂ, ಬೆಂಗಳೂರು – 560004

ನೋಂದಣಿ, ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ: 9606076487

ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?

ಇದೂ ಓದಿ: ಬಿಎಚ್‌ಎ ಆಯೋಜಿಸಿದ್ದ FoSTaC ಕಾರ್ಯಾಗಾರದಲ್ಲಿ ನೂರು ಮಂದಿ ಭಾಗಿ

ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?

ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ