ಒಳಗೇನಿದೆ!?

ಎಫ್‌ಕೆಸಿಸಿಐ ಚುನಾವಣೆಯಲ್ಲಿ ಆತಿಥ್ಯ ಕ್ಷೇತ್ರದ ಮೂವರು ನಿರ್ದೇಶಕರಾಗಿ ಆಯ್ಕೆ

ಹೋಟೆಲ್‌ ಕನ್ನಡ‌, ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ(ಎಫ್‌ಕೆಸಿಸಿಐ)ಯ 109ನೇ ವಾರ್ಷಿಕ ಮಹಾಸಭೆಯಲ್ಲಿ ಎಫ್‌ಕೆಸಿಸಿಐನ 2026-27ನೇ ಸಾಲಿನ ಅಧ್ಯಕ್ಷ ರಾಗಿ ಟಿ. ಸಾಯಿರಾಮ್ ಪ್ರಸಾದ್, ಹಿರಿಯ ಉಪಾಧ್ಯಕ್ಷರಾಗಿ ಬಿ.ಪಿ. ಶಶಿಧರ್ ಮತ್ತು ಉಪಾಧ್ಯಕ್ಷರಾಗಿ ಎನ್. ಸತೀಶ್ ಅವರು ಆಯ್ಕೆ ಆಗಿದ್ದಾರೆ.

ಇದೇ ವೇಳೆ ಎಫ್‌ಕೆಸಿಸಿಐನ  ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಇದರಲ್ಲಿ ಆತಿಥೇಯ ಕ್ಷೇತ್ರದ ಕೆ. ರಾಧಾಕೃಷ್ಣ ಹೊಳ್ಳ, ಪಿ.ಸಿ. ರಾವ್‌ ಹಾಗೂ ಎನ್‌. ವೀರೇಂದ್ರ ಕಾಮತ್‌ ಅವರು ವಿಜೇತರಾಗಿ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ.

ಇದೂ ಓದಿ: ಮತ್ತದೇ ಬೇಸರ.. ಮನಸು ಗಾಂಧಿಬಜಾರು.. ಮರಳೀತೇ ನಿತ್ಯೋತ್ಸವ?

ಕರ್ನಾಟಕ ಪ್ರವಾಸಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ಕೆ.ರಾಧಾಕೃಷ್ಣ ಹೊಳ್ಳ

ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್‌ ಸಾರಿಗೆ ಸಂಘಟನೆಯ ಸ್ಟೇರಿಂಗ್!

ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್.
ಕರ್ನಾಟಕ ರಾಜ್ಯ ಹೋಟೆಲ್‌ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ವೀರೇಂದ್ರ ಕಾಮತ್.‌

ಕರ್ನಾಟಕ ರಾಜ್ಯ ಪ್ರವಾಸಿ ವಾಹನ ಮಾಲೀಕರ ಸಂಘದ ಕೆ. ರಾಧಾಕೃಷ್ಣ ಹೊಳ್ಳ, ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ವೀರೇಂದ್ರ ಕಾಮತ್‌ ಅವರು ಸಣ್ಣ ಪ್ರಮಾಣದ ಸೇವಾ ಕ್ಷೇತ್ರ (ಸ್ಮಾಲ್‌ ಸ್ಕೇಲ್‌ ಸರ್ವಿಸ್‌ ಸೆಕ್ಟರ್‌) ವಿಭಾಗದಿಂದ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ. ಇವರೊಂದಿಗೆ ಇದೇ ಕ್ಷೇತ್ರದಲ್ಲಿ ಡಾ.ವಿ.ಜಿ. ಕಿರಣ್‌ಕುಮಾರ್‌, ಎಚ್.ಎ.ಕಿರಣ್‌, ಡಾ.ಮಧುರಾಣಿ ಗೌಡ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ.

ಇದೂ ಓದಿ:‌ ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?

ಹಾಗೆಯೇ ಸಂಘಗಳ ಕ್ಷೇತ್ರದಿಂದ ಬೆಂಗಳೂರು ಹೋಟೆಲುಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಗೌರವಾಧ್ಯಕ್ಷರಾಗಿರುವ ಪಿ.ಸಿ. ರಾವ್‌ ಅವರು ಎಫ್‌ಕೆಸಿಸಿಐ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ. ಎಫ್‌ಕೆಸಿಸಿಐನಲ್ಲಿ ಒಟ್ಟು 41 ಮಂದಿ ನಿರ್ದೇಶಕರಾಗಿದ್ದಾರೆ.

ಇದೂ ಓದಿ: ಹೋಟೆಲ್-ಪ್ರವಾಸೋದ್ಯಮ ಕ್ಷೇತ್ರದ ಗಣ್ಯರ ಜೊತೆ ಚರ್ಚಿಸಿದ ಸಿಎಂ; ಇಲ್ಲಿದೆ ಸಂಪೂರ್ಣ ವಿವರ..

ಇದೂ ಓದಿ: ಇಎಸ್‌ಐಸಿ ಪ್ರಾದೇಶಿಕ ನಿರ್ದೇಶಕರ ಜೊತೆ ಎಫ್‌ಕೆಸಿಸಿಐ ಪದಾಧಿಕಾರಿಗಳ ಸಂವಾದ

ಇದೂ ಓದಿ: ವಿಶ್ವ ಕುಂದಾಪ್ರ ಕನ್ನಡ ಹಬ್ಬಕ್ಕೆ ಮತ್ತೆ ʼಅರಮನೆʼಯ ರಾಜ ವೈಭೋಗ; ಕಾರಣಕರ್ತರಿವರು..

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ