ಒಳಗೇನಿದೆ!?

ಎಫ್‌ಕೆಸಿಸಿಐ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಹೊಳ್ಳ ನೇಮಕ

ಕೆ.ರಾಧಾಕೃಷ್ಣ ಹೊಳ್ಳ ಅವರಿಗೆ ಎಫ್‌ಕೆಸಿಸಿಐ ಅಧ್ಯಕ್ಷ ಟಿ.ಸಾಯಿರಾಂ ಪ್ರಸಾದ್‌ ಅವರಿಂದ ಪ್ರಮಾಣಪತ್ರ ಪ್ರದಾನ.

ಹೋಟೆಲ್‌ ಕನ್ನಡ, ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ(ಎಫ್‌ಕೆಸಿಸಿಐ)ದ 2026–27ನೇ ಸಾಲಿನ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಟ್ರಾವೆಲ್ಸ್‌ ಮಾಲೀಕರ ಸಂಘ(ಕೆಎಸ್‌ಟಿಒಎ)ದ ಅಧ್ಯಕ್ಷರಾದ ಕೆ. ರಾಧಾಕೃಷ್ಣ ಹೊಳ್ಳ ನೇಮಕಗೊಂಡಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಘದ 2026-27ನೇ ಸಾಲಿನ ವಿವಿಧ ಸಮಿತಿಗಳಿಗೆ ನೇಮಕಗೊಂಡ ಪ್ರತಿನಿಧಿಗಳಿಗೆ ಅವರ ಹುದ್ದೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಶುಕ್ರವಾರ ಎಫ್‌ಕೆಸಿಸಿಐ ಕಚೇರಿಯಲ್ಲಿ ವಿತರಿಸಲಾಗಿದೆ.  

ಇದೂ ಓದಿ: ಎಫ್‌ಕೆಸಿಸಿಐ ಚುನಾವಣೆಯಲ್ಲಿ ಆತಿಥ್ಯ ಕ್ಷೇತ್ರದ ನಾಲ್ವರು ನಿರ್ದೇಶಕರಾಗಿ ಆಯ್ಕೆ

ಎಫ್‌ಕೆಸಿಸಿಐ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ. ರಾಧಾಕೃಷ್ಣ ಹೊಳ್ಳ ಅವರಿಗೆ ಎಫ್‌ಕೆಸಿಸಿಐ ಅಧ್ಯಕ್ಷ ಟಿ. ಸಾಯಿರಾಂ ಪ್ರಸಾದ್ ಅವರು ಪ್ರಮಾಣಪತ್ರ ಪ್ರದಾನ ಮಾಡಿದರು.

ಇದೂ ಓದಿ: ಹೋಟೆಲ್-ಪ್ರವಾಸೋದ್ಯಮ ಕ್ಷೇತ್ರದ ಗಣ್ಯರ ಜೊತೆ ಚರ್ಚಿಸಿದ ಸಿಎಂ; ಇಲ್ಲಿದೆ ಸಂಪೂರ್ಣ ವಿವರ..

ಈ ಅವಕಾಶ ಕಲ್ಪಿಸಿದ್ದಕ್ಕಾಗಿ ಎಫ್‌ಕೆಸಿಸಿಐ ಅಧ್ಯಕ್ಷ ಟಿ. ಸಾಯಿರಾಂ ಪ್ರಸಾದ್ ಹಾಗೂ ಆಡಳಿತ ಮಂಡಳಿಯ ಎಲ್ಲ ಸದಸ್ಯರಿಗೆ ರಾಧಾಕೃಷ್ಣ ಹೊಳ್ಳ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಇದೂ ಓದಿ: ಕಾವೇರಿ ಕಾರ್ಸ್‌@34: ಒಂದು ಲ್ಯಾಂಡ್‌ಲೈನ್‌ನಿಂದ ಆರಂಭ, ಇಂದು ಪ್ರತಿಷ್ಠಿತ ಕಾರ್ಪೋರೇಟ್‌ ಸಾರಿಗೆ ಸೇವಾ ಸಂಸ್ಥೆ

ಅಲ್ಲದೆ, ಈ ಸಮಿತಿಗಳ ಮೂಲಕ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವರ ಸಲಹೆಗಳು ಚರ್ಚೆಗೆ ಬಂದು, ಕಾರ್ಯಸಾಧ್ಯ ಪರಿಹಾರಗಳಿಗೆ ದಾರಿ ತೆರೆಯಲಿ ಎಂಬುದಾಗಿಯೂ ಅವರು ಆಶಯ ವ್ಯಕ್ತಪಡಿಸಿದ್ದಾರೆ.

ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್‌ ಸಾರಿಗೆ ಸಂಘಟನೆಯ ಸ್ಟೇರಿಂಗ್!

ಇದೂ ಓದಿ: ಇನ್ಮುಂದೆ ಬೆರಳಿಟ್ಟರೂ, ಮುಖ ತೋರಿಸಿದರೂ ಹಣ ಟ್ರಾನ್ಸ್‌ಫರ್: ಏನಿದು ಹೊಸ ಫೀಚರ್?‌

ಇದೂ ಓದಿ: ಹತ್ತು ಲಕ್ಷ ರೂ. ಮೌಲ್ಯದ ಚಿನ್ನದ ಸರ ಗ್ರಾಹಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಹೋಟೆಲ್‌ ಕಾರ್ಮಿಕ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ